ಧಾರವಾಡ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆ
ಧಾರವಾಡ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಬೆಳೆ ಹಾನಿ ಆದ ಬಗ್ಗೆ ಸರಿಯಾದ ಮಾಹಿತಿ ಪಡೆದು, ವರದಿ ಸಲ್ಲಿಸಬೇಕು ಎಂದು ಲೋಕೋಪಯೋಗಿ ಹಾಗೂ ಧಾರವಾಡ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಮೇಲುಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಧಾರವಾಡ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು. ಧಾರವಾಡ ಜಿಲ್ಲೆಯಲ್ಲಿ ರೈತರು ಬೆಳೆದ ಬೆಳೆಗಳಿಗೆ ಮಳೆಯ…
