ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ವಹಿಸಿ ಮಾತನಾಡಿದರು.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನದಿತೀರದ ಗ್ರಾಮಗಳ ಕುರಿತು ತಹಶೀಲ್ದಾರರಿಂದ ಮಾಹಿತಿಯನ್ನು ಪಡೆದುಕೊಂಡ ಜಿಲ್ಲಾಧಿಕಾರಿಗಳು, ಪ್ರವಾಹ ಬಾಧಿತಗೊಳ್ಳಲಿರುವ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿತೀರದ ಗ್ರಾಮಗಳಲ್ಲಿ ತಹಶೀಲ್ದಾರರು, ನೋಡಲ್ ಅಧಿಕಾರಿಗಳು, ಅಗ್ನಿಶಾಮಕ ಮತ್ತು ಪೊಲೀಸ್ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು ಎಂದು ತಿಳಿಸಿದರು. ಮಂಗಾವತಿ, ಜುಗೂಳ, ಶಿರಗುಪ್ಪಿ, ಕುಸನಾಳ, ಬಳಜಿವಾಡ, ಮುಳವಾಡ, ಉಗಾರ್, ಯಡೂರ, ಮಾಂಜರಿ, ತಂಗಡಗಿ, ಶಿನಾಳ, ಝಂಜರವಾಡ, ಸತ್ತಿ,…
