ಶುದ್ಧ ಕುಡಿಯುವ ನೀರು ಪೂರೈಕೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಜರುಗಿದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಕಲುಷಿತ ಕುಡಿಯುವ ನೀರಿನಿಂದಾಗಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತಿರುವುದರಿಂದ ಕುಡಿಯುವ ನೀರು ಪೂರೈಸುವ ಮುಂಚೆ ಜಲಮೂಲಗಳಿಂದ ಸ್ಯಾಂಪಲ್ ತೆಗೆದುಕೊಂಡು ಪರೀಕ್ಷಿಸಬೇಕು. ನೀರು ಕುಡಿಯಲು ಯೋಗ್ಯವಾಗಿದ್ದರೆ ಮಾತ್ರ ಪೂರೈಸಬೇಕು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ಜಲಮೂಲಗಳನ್ನು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಪಿಡಿಓ ಗಳು ಕಡ್ಡಾಯವಾಗಿ ಪರಿಶೀಲಿಸಬೇಕು ಎಂದು ಹೇಳಿದರು. ವಿವಿಧ ತಾಲ್ಲೂಕುಗಳಿಗೆ…
