ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ : ಆಹಾರ ಇಲಾಖೆಯಿಂದ ದಾಳಿ ನಡೆಸಿ 515 ಕ್ವಿಂಟಾಲ್ ಪಡಿತರ ಅಕ್ಕಿ ಹಾಗೂ 6 ವಾಹನಗಳು ಜಪ್ತಿ
ಕಲಬುರಗಿ ಜಿಲ್ಲೆಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಸಾಗಾಟ ಮಾಡುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ದೂರು ಬಂದ ಆಧಾರದ ಮೇಲೆ ದಾಳಿ ಮಾಡಿ 17,70,275 ರೂ. ಮೌಲ್ಯದ ಒಟ್ಟು 515 ಕ್ವಿಂಟಾಲ್ ಪಡಿತರ ಅಕ್ಕಿ ಹಾಗೂ 6 ವಾಹನಗಳನ್ನು ಜಪ್ತಿ ಮಾಡಿ ಈ ಕೃತ್ಯಗಳಲ್ಲಿ ಭಾಗಿಯಾದ 18 ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕಲಬುರಗಿ ಆಹಾರ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪಡಿತರ ಚೀಟಿದಾರರಿಗೆ ಹಂಚಿಕೆಯಾಗಿರುವ ಅಕ್ಕಿಯನ್ನು ಅಕ್ರಮವಾಗಿ ಖರೀದಿ ಮಾಡಿ…
