BREAKING NEWS

ಶೌಚಾಲಯ ವ್ಯವಸ್ಥೆ ಇಲ್ಲದ ರಾಮದುರ್ಗ ತಹಶೀಲ್ದಾರ್ ಕಚೇರಿ; ಸಾರ್ವಜನಿಕರ ಪರದಾಟ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಗಳಿಗೆ ಶೌಚಾಲಯ ವ್ಯವಸ್ಥೆ ಇಲ್ಲದೆ ಪರದಾಡಬೇಕಾದ ಸ್ಥಿತಿಯಿದೆ. ರಾಮದುರ್ಗ ತಹಸೀಲ್ದಾರ್ ಕಚೇರಿಗೆ ಬರುವ ಸಾರ್ವಜನಿಕರಿಗೆ ತುರ್ತು ಬೇಕಾಗಿರುವ ಶೌಚಾಲಯದ ವ್ಯವಸ್ಥೆ ಕಲ್ಪಿಸದೇ ತಾಲೂಕು ಆಡಳಿತ ನಿರ್ಲಕ್ಷ್ಯ ವಹಿಸಿದೆ. ಇರುವ ಶೌಚಾಲಯದ ಬಾಗಿಲನ್ನು ಬಂದ್ ಮಾಡುವ ಮೂಲಕ ಸಾರ್ವಜನಿಕರ ಉಪಯೋಗದಿಂದ ದೂರವಿರಿಸಿದ್ದು, ಕಚೇರಿಗೆ ಆಗಮಿಸುವ ಸಾರ್ವಜನಿಕರು ಶೌಚಾಲಯಕ್ಕಾಗಿ ಕಚೇರಿಯ ಬಲಕ್ಕಿನ ಭಾಗದ ಗೋಡೆ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಾರೆ. ಆದ್ದರಿಂದ ವಾತಾವರಣ ದುರ್ನಾತದಿಂದ ಕೂಡಿದೆ. ಮಹಿಳೆಯರು ಪರದಾಡಬೇಕಾದ…

Read More

3.50 ಕೋಟಿ ಅನುದಾನದ ರಸ್ತೆ ನಿರ್ಮಾಣ ಕಾಮಗಾರಿಗೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿ ಪೂಜೆ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ 2.50 ಕೋಟಿ ಅನುದಾನದಲ್ಲಿ ಚಿಪ್ಪಲಕಟ್ಟಿ-ಕುನ್ನಾಳದಿಂದ ತಾಲೂಕಿನ ಗಡಿ ವರೆಗಿನ ರಸ್ತೆ ಸುಧಾರಣೆ ಹಾಗೂ ಕೆ.ಚಂದರಗಿ ಗ್ರಾಮದ ಹತ್ತಿರ 1 ಕೋಟಿ ಅನುದಾನದಲ್ಲಿ ರಾಮದುರ್ಗ ತಾಲೂಕಿನ ವ್ಯಾಪ್ತಿಯ ಬದಾಮಿ, ಗೊಡಚಿ, ಗೋಕಾಕ ಪಾಲ್ಸ್ ರಾಜ್ಯ ಹೆದ್ದಾರಿ ಆಯ್ದ ಭಾಗಗಳಲ್ಲಿ ಮರು ಡಾಂಬರೀಕರಣ ಸೇರಿದಂತೆ ಒಟ್ಟು 3.50 ಕೋಟಿ ಅನುದಾನದ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ನೆರವೇರಿಸಿ ಅವರು ಮಾತನಾಡಿದರು.ಕುನ್ನಾಳ ಗ್ರಾಮಸ್ಥರ ಬೇಡಿಕೆಯಂತೆ…

Read More

ರಾಮದುರ್ಗದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ಆಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ್, ಪುರಸಭೆ ಹಾಗೂ ಶ್ರೀ ಬಸವ ಜಯಂತಿ ಉತ್ಸವ ಕಮಿಟಿ ರಾಮದುರ್ಗ ಇವರ ಸಯುಕ್ತ ಆಶ್ರಯದಲ್ಲಿ ಬುಧವಾರದಂದು ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಮದುರ್ಗ ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು

Read More

ಕಾಶ್ಮೀರ ಕಣಿವೆಯ ಪಹಲ್ಗಾಮ್‌ನಲ್ಲಿ ನಡೆದ ಹಿಂದುಗಳ ಹತ್ಯೆಯನ್ನು ಖಂಡಿಸಿ ವಿಶ್ವಹಿಂದು ಪರಿಷತ್ ಹಾಗೂ ಭಜರಂಗದಳ ಹಾಗೂ ಹಲವು ಹಿಂದೂಪರ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಹಿಂದುಗಳ ಹತ್ಯೆ ಹಾಗೂ ರಾಜ್ಯದ ಕೆಲ ಕಡೆಗಳಲ್ಲಿ ಪವಿತ್ರ ಜನಿವಾರ ಧರಿಸಿದ ವಿದ್ಯಾರ್ಥಿಗಳನ್ನು ಸಿ.ಇ.ಟಿ. ಪರೀಕ್ಷಾ ಬರೆಯುವದಕ್ಕೆ ಅವಕಾಶ ನೀಡದೇ ಇರುವ ಕ್ರಮವನ್ನು ಖಂಡಿಸಿ ಸ್ಥಳೀಯ ವಿಶ್ವಹಿಂದು ಪರಿಷತ್ ಹಾಗೂ ಭಜರಂಗದಳ ಹಾಗೂ ಹಲವು ಹಿಂದೂಪರ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಇಬ್ಬರು ಕನ್ನಡಿಗರು ಸೇರಿದಂತೆ 27 ಅಮಾಯಕ ಜನರು ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಅಲ್ಲಿ ಭಯದ ವಾತಾವತವರಣ ಉಂಟಾಗಿದೆ….

Read More

ಶಿರೂರ ಗ್ರಾಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ

ಧಾರವಾಡ ಜಿಲ್ಲಾ ನವಲಗುಂದ ತಾಲೂಕಿನ ಶಿರೂರ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದು ಕೊರತೆ ಸಭೆ ಜರುಗಿತ್ತು. ನಂತರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶಿರೂರು ಗ್ರಾಮ ಪಂಚಾಯತಿಯ ಡಿಜಿಟಲ್ ಲೈಬ್ರರಿ ಅರಿವು ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಕಥೆ, ಕವನ, ಕಾದಂಬರಿ ಹಾಗೂ ಸ್ವರ್ದಾತ್ಮಕ ಪುಸ್ತಕಗಳು ಅರಿವು ಕೇಂದ್ರದಲ್ಲಿ ಲಭ್ಯವಿದ್ದು, ಶಾಲಾ ಮಕ್ಕಳಿಗೆ ತುಂಬಾ ಉಪಯುಕ್ತವಾಗಿದೆ ಎಂದು ಗ್ರಾಮಸ್ಥರು ತಿಳಿಸಿದರು. ಪ್ರತಿದಿನ ಅರಿವು ಕೇಂದ್ರದಲ್ಲಿ ಗ್ರಾಮದ ಹಿರಿಯರು…

Read More

ಏಪ್ರಿಲ್ 27 ರಂದು ಧಾರವಾಡ ಜಿಲ್ಲೆಗೆ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ ಆಗಮನ

ಧಾರವಾಡ ಏಪ್ರಿಲ್ 25: ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಆಯೋಜಿಸಿರುವ ಅನುಭವ ಮಂಟಪ ಬಸವಾದಿ ಶರಣರ ವೈಭವ ರಥಯಾತ್ರೆಯು ಏಪ್ರಿಲ್ 27 ರಂದು ಧಾರವಾಡ ಜಿಲ್ಲೆಯಲ್ಲಿ ಸಂಚರಿಸಲಿದೆ. ಎಪ್ರಿಲ್ 27 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಆಗಮಿಸಲಿದ್ದು, ರಥಾಯಾತ್ರೆಯ ಸ್ವಾಗತ ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು, ಬಸವ ಅಭಿಮಾನಿಗಳು, ಸಮಾಜದ ಪ್ರಮುಖರು, ಸಾರ್ವಜನಿಕರು ಆಗಮಿಸಬೇಕೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಮಗ್ರ ಕನ್ನಡಿಗರ ಜಯಕ್ಕಾಗಿ ಕನ್ನಡಿಗರ ಹಿತಕ್ಕಾಗಿ ಕೋಲಾರದಲ್ಲಿ ಈಡುಗಾಯಿ ಹೊಡೆದ ಕನ್ನಡಪರ ಸಂಘಟನೆಗಳ ಮುಖಂಡರು..!

ಕೋಲಾರ: ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಕನ್ನಡಿಗರ ಹಿತಕ್ಕಾಗಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಈಡುಗಾಯಿ ಒಡೆಯುವ ಚುಳುವಳಿ ಪ್ರಯುಕ್ತ ನಗರದ ಕೋಲಾರಮ್ಮ ದೇವಾಲಯದಲ್ಲಿ ಈಡುಗಾಯಿ ಒಡೆದು ಕನ್ನಡಿಗರ ಜಯಕ್ಕಾಗಿ ಒತ್ತಾಯಿಸಲಾಯಿತು. ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಮುಖಂಡರು ಕೋಲಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಈಡುಗಾಯಿ ಹೊಡೆದು ಚಳುವಳಿ ಪ್ರಾರಂಭಿಸಿದರು. ಕನ್ನಡಮಿತ್ರ ವೆಂಕಟಪ್ಪ ಮಾತನಾಡಿ ಅಖಂಡ ಕರ್ನಾಟಕದ ಕನ್ನಡಿಗರ…

Read More

ವರನಟ ಡಾ. ರಾಜಕುಮಾರ್ ಅವರ 97ನೇ ಜನ್ಮ‌ ದಿನಾಚರಣೆ

ಬೆಳಗಾವಿ. ವರನಟ ಡಾ. ರಾಜಕುಮಾರ್ ಅವರು ಕರ್ನಾಟಕ ಮಾತ್ರವಲ್ಲದೇ ಇಡೀ ದೇಶದ‌ ಹೆಮ್ಮೆಯಾಗಿದ್ದರು. ಅವರ ನಿಷ್ಠೆ, ಪ್ರಾಮಾಣಿಕತೆ, ಯೋಗಾಭ್ಯಾಸ, ಸರಳತೆಯನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ‌ಮೊಹಮ್ಮದ್ ರೋಷನ್ ಕರೆ ನೀಡಿದರು. ಬೆಳಗಾವಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಗರದ ವಾರ್ತಾ ಭವನದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ವರನಟ ಡಾ. ರಾಜಕುಮಾರ್ ಅವರ 97ನೇ ಜನ್ಮ‌ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಡಾ ರಾಜಕುಮಾರ್ ಅವರ ಚಲನಚಿತ್ರಗಳನ್ನು ನೋಡುವುದರ ಮೂಲಕ ನಾನು…

Read More

ಧಾರವಾಡ ನೀರಿನ ಕುಡಿಯುವ ಸಮಸ್ಯೆ ಚರ್ಚೆ ಜಿಲ್ಲಾ ಉಸ್ತವಾರಿ ಸಚಿವ ಸಂತೋಷ ಲಾಡ್ ಅವರಿಂದ ಸಭೆ

ಧಾರವಾಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮವನ್ನು ಅನುಸರಿಸಬೇಕು. ನೀರು ಪೂರೈಸಲು ವಿದ್ಯುತ್ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಂತರ ನವಲಗುಂದ ಕ್ಷೇತ್ರದ ಶಾಸಕರಾದ ಎನ್.ಹೆಚ್. ಕೋನರೆಡ್ಡಿ ಅವರು ಮಾತನಾಡಿ, ಕರೆಂಟ್‍ನಲ್ಲಿ ಸೊಲಾರ್ ಸಿಸ್ಟಮ್‍ನ್ನು ಅಳವಡಿಸಿಕೊಂಡರೆ ಒಳ್ಳೆಯದು. ವಿದ್ಯುತ್ ಮತ್ತು…

Read More

ತುರನೂರು ಗ್ರಾಮದಲ್ಲಿ ಅಕ್ರಮ ಮರಳು ಸಂಗ್ರಹಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತುರನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರುದ್ರಭೂಮಿಯ ಪಕ್ಕದಲ್ಲಿ ಇರುವ ಮಲಪ್ರಭಾ ನದಿಯಿಂದ ಅಕ್ರಮವಾಗಿ ಮರಳನ್ನು ಸಾರ್ವಜನಿಕರ ಆಸ್ತಿಯಾದ ರುದ್ರ ಭೂಮಿಯಲ್ಲಿ ತಮ್ಮ ಸ್ವಂತ ಆಸ್ತಿಯಂತೆ ಎಲ್ಲಿ ನೋಡಿದರೂ ಅಲ್ಲಿ ಅಕ್ರಮ ಮರಗಳನ್ನು ಸಂಗ್ರಹಣೆ ಮಾಡಿ ರಾತ್ರಿ ವೇಳೆ ಟ್ಯಾಕ್ಟರ್ ಗಳ ಮೂಲಕ ಸಾಗಾಟ ಮಾಡುವ ಉದ್ದೇಶದಿಂದ ಅಕ್ರಮ ಮರಳನ್ನು ಸಂಗ್ರಹಿಸಿರುತ್ತಾರೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದರು.

Read More