ಬೆಟಗೇರಿ:ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಕಾರ್ಯಕ್ರಮ ನಡೆಯಿತು.
ಬೆಟಗೇರಿ:ಶ್ರೀದೇವಿಯ ಮೇಲೆ ನಂಬಿಕೆ ಇಟ್ಟು ನಡೆದುಕೊಂಡವರ ಇಷ್ಟಾರ್ಥಗಳನ್ನು ಇಡೇರಿಸುತ್ತಾಳೆ. ಶ್ರೀದ್ಯಾಮವ್ವದೇವಿ ಮಹಾನ್ ಶಕ್ತಿ ದೇವತೆಯಾಗಿದ್ದಾಳೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಬಸವಂತ ಕೋಣಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಮಾತನಾಡಿ, ಬೆಟಗೇರಿ ಗ್ರಾಮದಲ್ಲಿ ಜರುಗುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ತನು, ಮನ, ಧನ ಮೂಲಕ ಸ್ಥಳೀಯರು ನೀಡುತ್ತಿರುವ ಸಹಾಯ, ಸಹಕಾರ ಶ್ಲಾಘನೀಯವಾಗಿದೆ ಎಂದರು.ಶುಕ್ರವಾರದಂದು ಮುಂಜಾನೆ ೧೦.೩೦ ಗಂಟೆಗೆ ಇಲ್ಲಿಯ ದ್ಯಾಮವ್ವದೇವಿ…
