ತಂಬೂರ-ಮುಕ್ಕಲ ಗ್ರಾಮ ಪಂಚಾಯತ ಪಿಡಿಓ ನಾಗರಾಜಕುಮಾರ ಎಸ್. ಬಿದರಳ್ಳಿ ಅಮಾನತ್ತುಗೊಳಿಸಿ, ಜಿಲ್ಲಾ ಪಂಚಾಯತ ಸಿಇಓ ಆದೇಶ.
ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ತಂಬೂರು ಗ್ರಾಮಪಂಚಾಯತ ಹಾಗೂ ಹೆಚ್ಚುವರಿ ಪ್ರಭಾರ ಮುಕ್ಕಲ ಗ್ರಾಮ ಪಂಚಾಯಿತಿಯ ಪಂಚಾಯತ ಅಭಿವೃದ್ಧಿ ಅಧಿಕಾರಿ ಆಗಿರುವ ನಾಗರಾಜಕುಮಾರ ಎಸ್. ಬಿದರಳ್ಳಿ ಅವರನ್ನು ಕರ್ತವ್ಯಲೋಪ ಹಾಗೂ ಹಣಕಾಸು ದುರಪಯೋಗ ಆಪದಾನೆಗಾಗಿ ಮೇರೆಗೆ ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಅಮಾನತ್ತುಗೊಳಿಸಿ, ಸೆಪ್ಟೆಂಬರ 6 ರಂದು ಆದೇಶ ಹೊರಡಿಸಿದ್ದಾರೆ. ಪಂಚಾಯತ ಅಭಿವೃದ್ಧಿ ಅಧಿಕಾರಿ ನಾಗರಾಜಕುಮಾರ ಬಿದರಳ್ಳಿ ಅವರು ತಂಬೂರ ಹಾಗೂ ಮುಕ್ಕಲ ಗ್ರಾಮಪಂಚಾಯತಗಳಲ್ಲಿ ಎಸ್ಕೋ ಬ್ಯಾಂಕ್ ಖಾತೆಯಿಂದ ಖಾಸಗಿ…
