ಅರಹುಣಸಿ ಗ್ರಾಮದಲ್ಲಿ ದೌರ್ಜನ್ಯಕ್ಕೊಳಗಾದ ಬುದ್ಧಿಮಾಂದ್ಯ ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
ಗದಗ ಜಿಲ್ಲೆಯ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ನಡೆದ ಅಮಾನವೀಯ ಘಟನೆಯೊಂದರಲ್ಲಿ ಅತ್ಯಾಚಾರಕ್ಕೊಳಗಾಗಿ, ಸುರಕ್ಷಿತ ಗರ್ಭಪಾತದ ನಂತರ ಚೇತರಿಸಿಕೊಳ್ಳುತ್ತಿರುವ ಬುದ್ಧಿಮಾಂದ್ಯ ಸಂತ್ರಸ್ತ ಯುವತಿಯ ನಿವಾಸಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ಡಾ. ನಾಗಲಕ್ಷ್ಮಿ ಚೌಧರಿ ಅವರು ಇಂದು ನೇರ ಭೇಟಿ ನೀಡಿದರು.ಗ್ರಾಮದ ರೇಗಡ ರಸ್ತೆಯ ಬಳಿಯಿರುವ ರೇಕ್ ಪತ್ರೆಯ ಸಣ್ಣ ಗುಡಿಸಲಿನಲ್ಲಿ ವಾಸಿಸುತ್ತಿರುವ ಸಂತ್ರಸ್ತೆ ಹಾಗೂ ಆಕೆಯ ತಾಯಿಯನ್ನು ಭೇಟಿಯಾದ ಆಯೋಗದ ಅಧ್ಯಕ್ಷರು, ಸಂತ್ರಸ್ತೆಯ ಕೈ ಹಿಡಿದು ಆತ್ಮಸ್ಥೈರ್ಯ ತುಂಬುವ ಸಾಂತ್ವನದ ಮಾತುಗಳನ್ನಾಡಿದರು. ಭೇಟಿಯ…
