ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೂರುಗಳು ದಾಖಲಾದಾಗ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ವಿನಾಕಾರಣ ವಿಳಂಬ ಮಾಡಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸಲಾಗುವುದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧಿಕಾರಿಗಳಿಗೆ ಎಚ್ಚರಿಕೆ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಅನುಸೂಚಿತ ಜಾತಿ/ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ/ಪಂಗಡದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳು ಜಾರಿಯಲ್ಲಿದ್ದು, ಸದರಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರಿಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಗೋಕಾಕಿನ ಜಿ.ಎಸ್.ಎಸ್. ಪದವಿ ಪೂರ್ವ ಕಾಲೇಜಿನ ಪ್ರಭಾರಿ ಪ್ರಾಚಾರ್ಯರ ನೇಮಕಾತಿ ಆದೇಶವನ್ನು…
