BREAKING NEWS

ಸವದತ್ತಿ ನ್ಯಾಯಾಲಯದಲ್ಲಿ 78ನೇ ಸ್ವಾತಂತ್ರ ದಿನೋತ್ಸವದ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹನವನ್ನು ಸವದತ್ತಿಯ ಹಿರಿಯ ದಿವಾಣಿ ನ್ಯಾಯಾಧೀಶರಾದ ಶ್ರೀ ಶಶಿಧರ ಎಮ್. ಗೌಡ ಅವರು ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹನವನ್ನು ಮಾಡಿದರು. ಧ್ವಜಾರೋಹನ ಕಾರ್ಯಕ್ರಮದಲ್ಲಿ ಸವದತ್ತಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಶ್ರೀ ಎಮ್. ಎನ್. ಮುತ್ತಿನ ಮತ್ತು ಉಪಾಧ್ಯಕ್ಷರಾದ ಶ್ರೀ ಜಿ. ಬಿ. ಮುನವಳ್ಳಿ ಹಾಗೂ ಕಾರ್ಯದರ್ಶಿಯಾದ ಶ್ರೀ ಎಮ್.ಎಫ್.ಬಾಡಿಗೇರ ಸಹ ಕಾರ್ಯದರ್ಶಿಯಾದ ಶ್ರೀ ಮಂಜು ಮಲ್ಲಾಡ,ಖಜಾಂಜಿಯಾದ ಎಮ್.ಎಸ್.ಪಂಚೆನವರ, ಮಹಿಳಾ ಪ್ರತಿನಿಧಿಯಾದ ಶ್ರೀಮತಿ ಸುನೀತಾ ಗೋಂಧಕ‌ ಮತ್ತು…

Read More

ಅಖಂಡ ಧಾರವಾಡ ಜಿಲ್ಲೆಯ 77 ಸ್ವಾತಂತ್ರ್ಯ ಹೋರಾಟಗಾರರ ಕುರಿತು 77 ಉಪನ್ಯಾಸ ಮಾಲಿಕೆಗಳ ಸಮಾರೋಪ ಸಮಾರಂಭವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಉದ್ಘಾಟಿಸಿದರು

ದಾರವಾಡ ವಾಯ್. ಬಿ. ಅಣ್ಣಿಗೇರಿ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಇತಿಹಾಸ ಉಪನ್ಯಾಸಕರ ಸಂಘ ಹಾಗೂ ಅಣ್ಣಿಗೇರಿ ಸೇವಾ ಟ್ರಸ್ಟ್‍ನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಅಖಂಡ ಧಾರವಾಡ ಜಿಲ್ಲೆಯ 77 ಸ್ವಾತಂತ್ರ್ಯ ಹೋರಾಟಗಾರರ ಕುರಿತು 77 ಉಪನ್ಯಾಸ ಮಾಲಿಕೆಗಳ ಸಮಾರೋಪ ಸಮಾರಂಭವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಉದ್ಘಾಟಿಸಿ, ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸಕ್ತ ವರ್ಷದ ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಗಿದೆ. ಸ್ವಾತಂತ್ರ್ಯದ 77 ವರ್ಷಗಳನ್ನು…

Read More

ಅನರ್ಹರು ಪಡೆದ ಬಿಪಿಎಲ್ ಪಡಿತರ ಚೀಟಿ ಹಿಂದಿರುಗಿಸಲು ಆಗಸ್ಟ್ 31 ಕೊನೆಯ ದಿನ: ತಪ್ಪಿದಲ್ಲಿ ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ.

ಧಾರವಾಡ ಆದ್ಯತಾ ಕುಟುಂಬ ಪಡಿತರ ಚೀಟಿ ಬಿಪಿಎಲ್ ಹೊಂದಿರುವ ಮಾನದಂಡಗಳ ಕುರಿತು ಮಾರ್ಚ 25, 2017 ರಲ್ಲಿ ಹೊರಡಿಸಿರುವ ಸರ್ಕಾರದ ಆದೇಶದಲ್ಲಿ ತಿಳಿಸಿರುವಂತೆ, ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವವರು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಲು ಅರ್ಹತೆಯನ್ನು ಹೊಂದಿರುವುದಿಲ್ಲವೆಂದು ಸ್ಪಷ್ಟಪಡಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಧಾರವಾಡ ಜಂಟಿ…

Read More

ವಿಕಲಚೇತನ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕಾಗಿ ವಿಕಲಚೇತನರ ಇಲಾಖೆಯಿಂದ ಅರ್ಜಿ ಆಹ್ವಾನ

ಆಗಸ್ಟ್ 14: ಭಾರತ ಸರ್ಕಾರವು ಪ್ರಿ-ಮೆಟ್ರಿಕ್, ಪೋಸ್ಟ್-ಮೆಟ್ರಿಕ್ ಹಾಗೂ ಟಾಪ್-ಕ್ಲಾಸ್ ಶಿಕ್ಷಣ ಪಡೆಯುವಂತಹ ವಿಕಲಚೇತನ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳು ಆಗಸ್ಟ್ 31, 2024 ರೊಳಗಾಗಿ ಮತ್ತು ಪೋಸ್ಟ್-ಮೆಟ್ರಿಕ್ ಹಾಗೂ ಟಾಪ್-ಕ್ಲಾಸ್ ಶಿಕ್ಷಣ ಪಡೆಯುವಂತಹ ವಿದ್ಯಾರ್ಥಿಗಳು ಅಕ್ಟೋಬರ್ 31,2024 ರೊಳಗಾಗಿ ವೆಬ್‍ಸೈಟ್ (https://scholarships.gov.in/) ನಲ್ಲಿ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0836-2744474 ಹಾಗೂ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಪ್ರಧಾನಮಂತ್ರಿಗಳ ಹೊಸ 15 ಅಂಶ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ

ದಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ವಹಿಸಿ, ಮಾತನಾಡಿದರು. ಕೆಲವು ಇಲಾಖೆ ಅಧಿಕಾರಿಗಳು ಮಾರ್ಚವರೆಗೂ ಅರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ಮಾಡುತ್ತಾರೆ. ಇದು ಸರಿ ಅಲ್ಲ. ಪ್ರತಿ ಇಲಾಖೆಯಿಂದ ಜಿಲ್ಲಾ ಹಂತದಲ್ಲಿ ತಮ್ಮ ಇಲಾಖೆಯಿಂದ ಕೊಡುವ ಫಲಾನುಭವಿ ಆಧಾರಿತ ಮತ್ತು ಸಮುದಾಯ ಆಧಾರಿತ ಯೋಜನೆಗಳ ಪ್ರಯೋಜನ ಪಡೆದಿರುವವರ ವಿವರಗಳನ್ನು ದಾಖಲಿಸಿ, ನಿರ್ವಹಿಸಬೇಕು. ಇದರಿಂದ ಡುಪ್ಲಿಕೆಟ್…

Read More

ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಜಿಲ್ಲಾಡಳಿತದಿಂದ ಐತಿಹಾಸಿಕ ಬೆಟ್ಟ ಹತ್ತುವ ಕಾರ್ಯಕ್ರಮ

ಬಳ್ಳಾರಿ ಹರ್ ಘರ್ ತಿರಂಗಾ ಅಭಿಯಾನದಂ ಅಂಗವಾಗಿ ಮಂಗಳವಾರ ಜಿಲ್ಲಾಡಳಿತ ವತಿಯಿಂದ ನಗರದ ಐತಿಹಾಸಿಕ ಬೆಟ್ಟದ ಮೇಲೆ ಹಮ್ಮಿಕೊಂಡಿದ್ದ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್ ಭಾಗವಹಿಸಿ ಅವರು ಮಾತನಾಡಿದರು.ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ಎಷ್ಟೋ ಮಹಾನುಭಾವರು ಮತ್ತು ಮಹನಿಯರು ತಮ್ಮ ಪ್ರಾಣವನ್ನು ಮುಡಿಪಾಗಿಟ್ಟಿದ್ದಾರೆ. ಮಹಾನುಭಾವರ ತ್ಯಾಗ ಬಲಿದಾನಗಳ ಪ್ರತೀಕವೇ ಸ್ವಾತಂತ್ರ್ಯವಾಗಿದ್ದು ವಿದ್ಯಾರ್ಥಿಗಳು ಸ್ವಾತಂತ್ರ ಹೋರಾಟಗಾರರ ಮೌಲ್ಯ ಬೆಳೆಸಿಕೊಂಡು, ದೇಶ ಪ್ರೇಮ ಮೈಗೂಡಿಸಿಕೊಳ್ಳಬೇಕು ಎಂದರು.ವಿಶ್ವದಲ್ಲಿಯೇ ಭಾರತವು ಅತೀ ಹೆಚ್ಚು ಯುವಕರನ್ನು ಒಳಗೊಂಡಂತಹ ದೇಶವಾಗಿದೆ. ಯುವಕರು ತಮ್ಮ ಯೌವ್ವನವನ್ನು…

Read More

ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಎರಡು ದಿನಗಳ ‘ಅಂತರ್‌ವಿಭಾಗೀಯ ಯುವಜನೋತ್ಸವ

ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಎರಡು ದಿನಗಳ ‘ಅಂತರ್‌ವಿಭಾಗೀಯ ಯುವಜನೋತ್ಸವ-2024’ ಕಾರ್ಯಕ್ರಮಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಮಾಜಿ ಅಧ್ಯಕ್ಷರು ಹಾಗೂ ಸಾಹಿತಿಗಳಾದ ಸಿದ್ದರಾಮ ಕಲ್ಮಠ ಚಾಲನೆ ನೀಡಿ ಅವರು ಮಾತನಾಡಿದರು.ಪ್ರಪಂಚದಲ್ಲಿ ವಿಶಿಷ್ಟವಾದ ಸಾಂಸ್ಕೃತಿಕ ನೆಲೆಗಟ್ಟುಗಳನ್ನು ಭಾರತದಲ್ಲಿ ಮಾತ್ರ ಕಾಣಬಹುದಾಗಿದೆ. ವಿದ್ಯಾರ್ಥಿಗಳು ಸಾಂಸ್ಕೃತಿಕ ಮನೋಭಾವನೆಯಿಂದಾಗಿ ಸಮಾಜದಲ್ಲಿ ಸ್ಥಿರವಾಗಿ ನಿಲ್ಲುತ್ತಾರೆ ಎಂದು ಅವರು ಅಭಿಪ್ರಾಯ ಪಟ್ಟರು.ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಜೆ.ತಿಪ್ಪೇರುದ್ರಪ್ಪ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಪದ ಕಲೆಗಳು ಕಾಣಸಿಗುವುದು ಹಳ್ಳಿಗಳಲ್ಲಿ ಮಾತ್ರ. ವಿದ್ಯಾರ್ಥಿಗಳು ಅಂತರ್ಜಾಲ ಬಳಕೆಯನ್ನು…

Read More

ಮನೆ ಹಾನಿಗಳಿಗೆ ತಕ್ಷಣವೇ ಪರಿಹಾರ ಒದಗಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಅತಿವೃಷ್ಠಿ/ಪ್ರವಾಹ ಉಂಟಾಗಿದ್ದು, ಹಾನಿಗೊಳಗಾದ ಮನೆಗಳ ಸ್ಥಳಗಳನ್ನು ಮಹಜರು ಮಾಡಿ ವಸತಿ ನಿಗಮದ ಪೋರ್ಟಲ್‌ನಲ್ಲಿ ಮಾಹಿತಿ ಅಳವಡಿಸಿ, ತಕ್ಷಣವೇ ಪರಿಹಾರ ಒದಗಿಸಬೇಕು. ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿ ಬಗ್ಗೆ ಸಂಬಂಧಿಸಿದ ಇಲಾಖೆಗಳೊಂದಿಗೆ ಜಂಟಿ ಸಮೀಕ್ಷೆ ನಡೆಸಿ ಪರಿಹಾರ ಪೋರ್ಟಲ್‌ನಲ್ಲಿ ಹಾನಿ ಕುರಿತ ದತ್ತಾಂಶ ಅಳವಡಿಸಬೇಕು. ಜಿಲ್ಲೆಯಲ್ಲಿ ಸಂಪೂರ್ಣ…

Read More

ಉತ್ತರ ಕರ್ನಾಟಕ‌ ಭಾಗದ ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಮ: ಡಾ.ಕೆ.ವಿ.ರಾಜೇಂದ್ರ

ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಜರುಗಿದ ಬೆಳಗಾವಿಯ ಪ್ರಯಾಣ,‌ ಪ್ರವಾಸೋದ್ಯಮ‌ ಮತ್ತು ಆತಿಥ್ಯ ಮದ್ಯಸ್ಥಿಕೆಗಾರರೊಂದಿಗೆ ಜರುಗಿದ ಸಂವಾದ ಕಾರ್ಯಕ್ರಮವನ್ನು ಪ್ರವಾಸೋದ್ಯಮ‌ ಇಲಾಖೆ ನಿರ್ದೇಶಕ ಡಾ.ಕೆ.ವಿ. ರಾಜೇಂದ್ರ ಉದ್ಘಾಟಿಸಿ ಅವರು‌ ಮಾತನಾಡಿದರು. ಬೆಳಗಾವಿ ಹತ್ತಿರದ ಚನ್ನಮ್ಮನ ಕಿತ್ತೂರು, ನಂದಗಡ, ರಾಜಹಂಸಗಡ ಸೇರಿದಂತೆ ಇನ್ನೂ ಅನೇಕ ಪ್ರವಾಸಿ‌ ತಾಣಗಳ‌ ಕುರಿತು ಜಾಗತಿಕ ಮಟ್ಟದಲ್ಲಿ ಪ್ರಚಾರ ಕೈಗೊಳ್ಳಬೇಕು. ಈ ಭಾಗದ ಜನರ ಧೈರ್ಯ, ಕಾರ್ಯಕ್ಷಮತೆ, ಹಾಗೂ ನೈಸರ್ಗಿಕ ಸಂಪತ್ತುಗಳ ಕುರಿತು ಜಾಗೃತಿ‌ ಮೂಡಿಸಬೇಕು. ಖಾನಾಪುರ ಭಾಗದ ಅರಣ್ಯ ಪ್ರದೇಶವು ತೀರ್ಥಹಳ್ಳಿಯ…

Read More

ಬನಶಂಕರಿದೇವಿ ಸಮುದಾಯ ಭವನದ ನೂತನ ಕಟ್ಟಡವನ್ನು ಕಾಂಗ್ರೆಸ್ ಮುಖಂಡ ಪ್ರದೀಪ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಣಕಾರ ಪೇಟೆಯಲ್ಲಿ ಶನಿವಾರದಂದು ಶ್ರೀ ಬನಶಂಕರಿದೇವಿ ಸಮುದಾಯ ಭವನದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭÀವನ್ನು ಕಾಂಗ್ರೆಸ್ ಮುಖಂಡ ಪ್ರದೀಪ ಪಟ್ಟಣ ಉದ್ಘಾಟಿಸಿ ಮಾತನಾಡಿದರು. ನಮ್ಮ ತಂದೆ ತಾಯಿ ಶಾಸಕರಿದ್ದ ಕಾಲದಿಂದಲೂ ನೇಕಾರರು ನಮಗೆ ಬೆಂಬಲಿಸಿದ್ದಾರೆ. ನಿಮ್ಮ ಋಣ ತೀರಿಸಲು ನಾವು ಸದಾಸಿದ್ದ ಎಂದು ಹೇಳಿದರು. ಈ ವೇಳೆ ಹಂಪಿ ಹೇಮಕೂಟ ಮಹಾಸಂಸ್ಥಾನ ಶ್ರೀಗಾಯತ್ರಿ ಪೀಠದ ಪೀಠಾಧಿಪತಿ ಶ್ರೀ ದಯಾನಂದಪುರಿ ಸ್ವಾಮೀಜಿ ಮಾತನಾಡಿ ನೇಕಾರರು ಕೇವಲ ಬಟ್ಟೆ ನೇಯ್ಗೆ ಕಾಯಕ ಮಾಡುವುದು ಅಷ್ಟೇ…

Read More