ರಾಮದುರ್ಗ ಪೊಲೀಸ್ ಠಾಣೆ ವತಿಯಿಂದ ಮಾದಕ ದ್ರವ್ಯಗಳ ಜಾಗೃತಿ ಅಭಿಯಾನ
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಮದುರ್ಗ ಪೊಲೀಸ್ ಠಾಣೆ ವತಿಯಿಂದ ಮಾದಕ ದ್ರವ್ಯಗಳ ಜಾಗೃತಿ ಅಭಿಯಾನವನ್ನು ಆಯೋಜಿಸಿತು. ಈ ಕಾರ್ಯಕ್ರಮವು ಸಾರ್ವಜನಿಕರಿಗೆ ಮಾದಕ ವ್ಯಸನದ ಅಪಾಯಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಮಾದಕ ದ್ರವ್ಯ ಮುಕ್ತ ಸಮಾಜವನ್ನು ಉತ್ತೇಜಿಸುವ ಗುರಿಯನ್ನು ಹೊಂದಿತ್ತು. ಮಾದಕ ವಸ್ತುಗಳ ಬಗ್ಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಜಾಗೃತಿ ಮೂಡಿಸಲಾಯಿತು. ಮಾದಕ ವಸ್ತು ಸೇವನೆ, ಮಾರಾಟ ಮತ್ತು ಸಾಗಾಟ ಕಾನೂನು ಪ್ರಕಾರ…
