ಬೆಳಗಾವಿ ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪುತ್ಥಳಿ ಅನಾವರಣ
ಬೆಳಗಾವಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕವನ್ಮು ತಿರುಗಿಸುವ ಮೂಲಕ ಮಂಗಳವಾರ ಅನಾವರಣಗೊಳಿಸಿದರು. ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಗಾಂಧೀಜಿಯವರ ಪುತ್ಥಳಿಯ ಸ್ಥಾಪನೆಯಿಂದ ಈ ಭಾಗಕ್ಕೆ ಮಾತ್ರವಲ್ಲ; ಇಡೀ ಕರ್ನಾಟಕಕ್ಕೆ ಗೌರವ ತಂದಿದೆ ಎಂದು ಅಭಿಪ್ರಾಯಪಟ್ಟರು. ಸಂವಿಧಾನ ಹಾಗೂ…
