ನೌಕರರ ಸಂಘದ ನೇತೃತ್ವದಲ್ಲಿ ನೌಕರರ ಮಕ್ಕಳಿಗೆ ಏರ್ಪಡಿಸಿದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಾಧನೆ ಮಾಡಿದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ನೌಕರರ ಸಭಾ ಭವನದಲ್ಲಿ ನೌಕರರ ಸಂಘದ ನೌಕರರು ಆಯೋಜಿಸಿದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ 2024-25 ನೇ ಸಾಲಿನಲ್ಲಿ ಎಸ್ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಕಾಂಗ್ರೆಸ್ ಮುಖಂಡ ಪ್ರದೀಪ ಅವರು ಉದ್ಘಾಟಿಸಿದರು. ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಮಾತ್ರ ಮಹತ್ವ ನೀಡದೇ, ತಮ್ಮ ವ್ಯಾಸಂಗಕ್ಕೆ ಮಾರ್ಗದರ್ಶನ ನೀಡಿದ ಶಿಕ್ಷಕರು, ಪಾಲಕರನ್ನು ದೇವರಂತೆ ಕಾಣಬೇಕು. ಅಂದಾಗ ಎಲ್ಲರೂ ನೆಮ್ಮದಿಯ ಜೀವನ ಸಾಗಿಸಲು ಸೂಚಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ. ಬಳಿಗಾರ ಮಾತನಾಡಿ,…
