ರಾಜ್ಯದ ನೂತನಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಬೆಂಗಳೂರು : ರಾಜ್ಯದ ನೂತನಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯನ ಹೆಸ-ರಿನಲ್ಲಿ ಅಧಿಕಾರ ಹಾಗೂ ಗೌಪ್ಯತಾ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ಪೂರ್ವಾಭಿಮುಖವಾಗಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕಾಗಿ ವಿಶೇಷವಾಗಿ ಪೂರ್ವಾಭಿಮುಖವಾಗಿ ಸಿದ್ದಪಡಿಸಲಾದ ವೇದಿಕೆಯಲ್ಲಿ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿಗಳಿಗೆ ಅಧಿಕಾರಪದ ಮತ್ತು ಗೋಪ್ಯಾತಾ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಉಪ ಮುಖ್ಯಮಂತ್ರಿಗಳಾಗಿ ಡಾ. ಜಿ.ಪರಮೇಶ್ವರ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ…
