ರಾಜ್ಯದ 4 ಕಡೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು : ರಾಜ್ಯದ 4 ಕಡೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ, ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಸುಶೀಲಮ್ಮ ವರ್ಷದ ಹಿಂದೆ ವಿಆರ್ಎಸ್ ಪಡೆದಿದ್ದರು. ಅಕೌಂಟೆಂಟ್ ಆಗಿದ್ದ ವೇಳೆ ಸುಶೀಲಮ್ಮ ಭ್ರಷ್ಟಾಚಾರ ಮಾಡಿದ್ದು, ಆದಾಯ ಮೀರಿ ಹಣ, ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು…
