ಮಳೆಯಂದಾಗಿ ಹಾನಿಗೊಳಗಾದ ಮನೆಗಳಿಗೆ ಪರಿಹಾರ ವಿತರಣಾ ಕಾರ್ಯದಲ್ಲಿ ಯಾವುದೇ ಕಾರಣಕ್ಕೂ ವಿಳಂಬವಾಗದಂತೆ ನಿಗಾವಹಿಸಬೇಕು. ವಿಫುಲ್ ಬನ್ಸಲ್ ಸೂಚನೆ
ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ ಜರುಗಿದ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ವಿಫುಲ್ ಬನ್ಸಲ್ ವಹಿಸಿ ಅವರು ಮಾತನಾಡಿದರು. ಅತೀವೃಷ್ಠಿಯಿಂದಾಗಿ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ವಿತರಣೆಗೆ ಸಂಬಂಧಿಸಿದ ಇಲಾಖೆಗಳು ಜಂಟಿಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ಪರಿಹಾರ ವಿತರಣೆಗೆ ಕ್ರಮಕೈಗೊಳ್ಳಬೇಕು.ಮಳೆಯಂದಾಗಿ ಹಾನಿಗೊಳಗಾದ ಮನೆಗಳಿಗೆ ಪರಿಹಾರ ವಿತರಣಾ ಕಾರ್ಯದಲ್ಲಿ ಯಾವುದೇ ಕಾರಣಕ್ಕೂ ವಿಳಂಬವಾಗದಂತೆ ನಿಗಾವಹಿಸಬೇಕು. ಪ್ರತಿ ಗ್ರಾಮ ಪಂಚಾಯತಗಳಲ್ಲಿ ಕಡ್ಡಾಯವಾಗಿ ಗ್ರಾಮ ಸಭೆಗಳನ್ನು ಆಯೋಜಿಸ ಬೇಕು. ಗ್ರಾಮ ಸಭೆಗಳ…
