BREAKING NEWS

ಜಿಲ್ಲೆಯಲ್ಲಿ ಭಾರಿ ಮಳೆ, ಪ್ರವಾಹದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಧಾರವಾಡ ಭಾರತೀಯ ಹವಾಮಾನ ಇಲಾಖೆ ವರದಿಯಂತೆ ವಾಯುಭಾರ ಕುಸಿತದಿಂದ ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದರಿಂದ ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ, ಪ್ರವಾಹದ ಮುನ್ಸೂಚನೆ ಇದ್ದು, ಜಿಲ್ಲೆಯ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡದಂತೆ ಆದೇಶಿಸಿದ್ದಾರೆ. ಈ ಕುರಿತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲೆಯ ಎಲ್ಲ ತಾಲ್ಲೂಕಿನ ಅಧಿಕಾರಿಗಳಿಗೆ ಪ್ರಭಾರ ಜಿಲ್ಲಾಧಿಕಾರಿಗಳಾಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ ಅವರು ತಿಳಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಸತತ ಮಳೆ ಸುರಿಯುತ್ತಿದ್ದು…

Read More

ಹಲಗತ್ತಿಯಿಂದ ಬಾಳೆಕುಂದ್ರಿ ಕಾಲುವೆವರೆಗೆ ಹದಗೆಟ್ಟ ರಸ್ತೆ : ಯಾಮಾರಿದರೆ ಯಮಲೋಕ ದರ್ಶನ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಿಂದ ಬಾಳೆಕುಂದ್ರಿ ಕಾಲುವೆಯವರೆಗೆ ರಸ್ತೆ ತುಂಬ ಗುಂಡಿಮಯ ಗ್ರಾಮದ ಕೆಲ ಪ್ರಮುಖ ರಸ್ತೆಗಳು ಸೇರಿದಂತೆ ಒಳ ರಸ್ತೆಗಳಲ್ಲಿ ರಸ್ತೆಗಳನ್ನು ಹುಡುಕಿ ವಾಹನ ಸಂಚಾರ ಮಾಡಬೇಕಾದ ಪರಿಸ್ಥಿತಿ ಇದೆ. ರಸ್ತೆ ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಗೆ ಅಧಿಕಾರಿಗಳು ಇನ್ನೂ ಮನಸ್ಸು ಮಾಡಿಲ್ಲ. ಹೀಗಾಗಿ ರಸ್ತೆ ಮಧ್ಯೆ ದೊಡ್ಡ ಗುಂಡಿಗಳು ನಿರ್ಮಾಣವಾಗಿ ಸಂಚಾರಕ್ಕೆ ಅಸಾಧ್ಯದ ಪರಿಸ್ಥಿತಿ ತಂದೊಡ್ಡಿವೆ. ನೀರು ಹರಿದುಹೋಗಲು ಜಾಗವಿಲ್ಲದೆ ರಸ್ತೆಯಲ್ಲೇ ನೀರು ನಿಲ್ಲುತ್ತಿದೆ. ರಸ್ತೆಗಳು ತೀವ್ರ ಹದಗೆಟ್ಟಿದ್ದು, ರಸ್ತೆಯಲ್ಲಿನ ಗುಂಡಿಗಳು…

Read More

2024-25 ನೇ ಸಾಲಿನ ಸರ್ಕಾರದ ಬೆಂಬಲಬೆಲೆ ಯೋಜನೆಯಡಿಯಲ್ಲಿ ಹೆಸರುಕಾಳು ಖರೀದಿ ಮತ್ತು ಸೂರ್ಯಕಾಂತಿ ಖರೀದಿಗೆ ಮುಖ್ಯ ಸಚೇತಕರು ಅಶೋಕ ಮ. ಪಟ್ಟಣ ಜ್ಯೋತಿ ಬೆಳಗಿಸೋದರ ಮೂಲಕ ಚಾಲನೆ ನೀಡಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ, ಬೆಂಗಳೂರು ಹೆಸರುಕಾಳು ಖರೀದಿ ಕರ್ನಾಟಕ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘ ನಿ, ಹುಬ್ಬಳ್ಳಿ ಸೂರ್ಯಕಾಂತಿ ಖರೀದಿ ಇವರ ಸಹಯೋಗದೊಂದಿಗೆ ರಾಮದುರ್ಗ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿ, ರಾಮದುರ್ಗ ಇದರಿಂದಸನ್ 2024-25 ನೇ ಸಾಲಿನ ಸರ್ಕಾರದ ಬೆಂಬಲಬೆಲೆ ಯೋಜನೆಯಡಿಯಲ್ಲಿ ಹೆಸರು ಕಾಳು ಖರೀದಿ ಮತ್ತು ಸೂರ್ಯಕಾಂತಿ ಖರೀದಿಗೆ ಜನಪ್ರಿಯ ಶಾಸಕರು…

Read More

ಮಳೆ ನೀರು ಪುರಸಭೆ ಗೇಟಿನ ಒಳಗೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಮಳೆ ಆದರೆ ಸಾಕು ಮಳೆ ನೀರು ಪುರಸಭೆ ಗೇಟಿನ ಒಳಗೆ ಬರುವುದು ಇದರಿಂದ ಪುರಸಭೆ ಕಾರ್ಯಾಲಯಕ್ಕೆ ಬರ್ತಕಂತ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ ಇದಲ್ಲದೆ ಪುರಸಭೆ ಕಟ್ಟಡ ಕೂಡ ಅಲ್ಲಲ್ಲಿ ಶೀತಲಗೊಂಡು ಮಳೆಯ ನೀರು ಪುರಸಭೆಯ ಒಳಗೆ ಬರುವುದು ಆದಷ್ಟು ಬೇಗ ಅಧಿಕಾರಿಗಳು ಇದರ ಕಡೆ ಗಮನ ಹರಿಸಿ ಸರಿ ಮಾಡುತ್ತಾರೆ ಎಂದು ಕಾದು ನೋಡಬೇಕಾಗಿದೆ

Read More

ದುರ್ಗಾಮಾತಾ ಉತ್ಸವ ಕಮಿಟಿ ವತಿಯಿಂದ ಅನ್ನಪ್ರಸಾದ : ಅನ್ನ ಪ್ರಸಾದ ಶುರು ಆಗ್ತುತಿದಂತೆ ಮಳೆರಾಯನ ಆರ್ಭಟ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತೇರ ಬಜಾರದಲ್ಲಿ ಶ್ರೀ ದುರ್ಗಾಮಾತಾ ಉತ್ಸವ ಕಮಿಟಿ ವತಿಯಿಂದ ಬುಧವಾರ ಅನ್ನಪ್ರಸಾದ ಕಾರ್ಯಕ್ರಮ ಜರಗಿತ್ತು ಅನ್ನಪ್ರಸಾದ ಶುರು ಆಗುತ್ತಿದ್ದಂತೆ ಮಳೆರಾಯನ ಆರ್ಭಟ ಜೋರಾಗಿ ಇತ್ತು ಇದೆ ಸಂದರ್ಭದಲ್ಲಿ ಭಕ್ತಾದಿಗಳು ಮಳೆಯಲ್ಲಿ ಪ್ರಸಾದವನ್ನು ಸೇವನೆ ಮಾಡಿದರು

Read More

ನ.1 ರಂದು ಕರ್ನಾಟಕ ಅದ್ದೂರಿ‌ ರಾಜ್ಯೋತ್ಸವ; ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ.

ಬೆಳಗಾವಿ ಜಿಲ್ಲಾ‌ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ವಹಿಸಿ ಮಾತನಾಡಿದರು. ನ.1 ರಂದು ದೀಪಾವಳಿ ಹಬ್ಬದ ದಿನವೇ ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಅತೀ ವಿಜೃಂಭಣೆಯಿಂದ ಆಚರಿಸಲಾಗುವದು. ರಾಜ್ಯೋತ್ಸವದ ಹಿನ್ನೆಲೆಯಲ್ಲಿ‌ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯೋತ್ಸವದ ಹಿನ್ನೆಲೆಯಲ್ಲಿ‌ ಕನ್ನಡ‌ ನಾಡು ನುಡಿಗಾಗಿ ಶ್ರಮಿಸಿದ ಕನ್ನಡ ಹೋರಾಟಗಾರರಿಗೆ ಸನ್ಮಾನ ಮಾಡಲಾಗುವುದು. ಅಲ್ಲದೇ ಈ ಬಾರಿ‌ ಕನ್ನಡ ಪರ ಹೋರಾಟಗಾರರು ಹಾಗೂ…

Read More

30 ಕೋಟಿ ವೆಚ್ಚದಲ್ಲಿ ವಿದ್ಯುನ್ಮಾನ ಮಾದರಿ ಉದ್ಯಾನವನ ನಿರ್ಮಾಣ: ಸಚಿವ ಕೃಷ್ಣ ಭೈರೇಗೌಡ

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಕಿತ್ತೂರು ಕೋಟೆ ಆವರಣದಲ್ಲಿ ಮಂಗಳವಾರ ಜರಗಿದ. ಚನ್ನಮ್ಮನ ಕಿತ್ತೂರಿನ ಕೋಟೆ, ಅರಮನೆ ಸಂರಕ್ಷಣಾ ಕಾಮಗಾರಿಯನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವಿವಿಧ ಕಾಮಗಾರಿಯ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು ಮಾತನಾಡಿದರು. ಕೋಟೆಯ ಮಹಾದ್ವಾರ, ಗೋಡೆಗಳು ಸೇರಿಂತೆ ವಿವಿಧ ಅವಶೇಷಗಳನ್ನು ಸಂರಕ್ಷಿಸಲು ರೂ. 12.11 ಕೋಟಿ ಹಾಗೂ ಇನ್ನಿತರ ಕಾಮಗಾರಿಗಳಿಗೆ 2.4 ಕೋಟಿ ಅನುದಾನ ಬಳಕೆಯಾಗಲಿದೆ. ಕಳೆದ ಒಂದು…

Read More

ಸಿಇಟಿ-ಸಕ್ಷಮ್”ಕಾರ್ಯಕ್ರಮ ರಾಜ್ಯಕ್ಕೆ ಮಾದರಿ

ಬೆಳಗಾವಿ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯಗಳ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳನ್ನು ನೀಟ್-ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಗೊಳಿಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಆರಂಭಿಸಲಾಗಿರುವ “ಸಿಇಟಿ-ಸಕ್ಷಮ್” ಕಾರ್ಯಕ್ರಮವು ಇಡೀ ರಾಜ್ಯಕ್ಕೆ ಮಾದರಿಯಾಗಿ ಹೊರಹೊಮ್ಮಿದೆ! ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂಧೆ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ಪರೀಕ್ಷೆಗಳ ಕುರಿತು ಅಧ್ಯಯನಕ್ಕಾಗಿ ಶಿವಮೊಗ್ಗ ಜಿಲ್ಲೆಯ ತಂಡವು ಜಿಲ್ಲೆಗೆ ಆಗಮಿಸಿರುತ್ತದೆ. ಬೆಳಗಾವಿ ಜಿಲ್ಲೆಯ ಉಪ ನಿರ್ದೇಶಕರ ಕಾರ್ಯಾಲಯ ಪ.ಪೂ ಶಿಕ್ಷಣ ಇಲಾಖೆ ಬೆಳಗಾವಿ ಕಚೇರಿಯಲ್ಲಿ “ಸಿಇಟಿ-ಸಕ್ಷಮ್ ಕಾರ್ಯಕ್ರಮದ ಕಾರ್ಯವಿಧಾನವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಅಳವಡಿಸಿಕೊಳ್ಳುವ…

Read More

ಚನ್ನಮ್ಮನ ಕಿತ್ತೂರು ಉತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಶಾಸಕ ಬಾಬಾಸಾಹೇಬ ಪಾಟೀಲ ಸೂಚನೆ

ಬೆಳಗಾವಿ ಜಿಲ್ಲೆ ಬೈಲಹೊಂಗಲ ಉಪವಿಭಾಗಾಧಿಕಾರಿಗಳ‌ ಕಚೇರಿಯಲ್ಲಿ ಸೋಮವಾರ ಜರುಗಿದ ಚನ್ನಮ್ಮನ ಕಿತ್ತೂರು ಉತ್ಸವ-2024 ಮತ್ತು ಚನ್ನಮ್ಮನವರ 200ನೇ‌ ವಿಜಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ವಹಿಸಿ ಮಾತನಾಡಿದರು. ಚನ್ನಮ್ಮನ ಕಿತ್ತೂರು ಉತ್ಸವ-2024 ಕಾರ್ಯಕ್ರಮ ಯಶಸ್ವಿಗಾಗಿ ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಪ್ರಸಕ್ತ ಸಾಲಿನ ಉತ್ಸವವನ್ನು ಯಾವುದೇ ರೀತಿಯ ಲೋಪಗಳಾಗದಂತೆ ಯಶಸ್ವಿಯಾಗಿ ಆಚರಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.ಮೂರು…

Read More

ಸೈಬರ್ ಅಪರಾಧ ತಡೆಗೆ ಪೊಲೀಸ್ ಸಿಬ್ಬಂದಿಗೆ ಅಗತ್ಯ ತರಬೇತಿ:ಸಚಿವ ಪರಮೇಶ್ವರ

ಧಾರವಾಡ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆಗಟ್ಟಲು ಈಗಾಗಲೇ ಅಸ್ತಿತ್ವದಲ್ಲಿರುವ ಸೆನ್ ಠಾಣೆಗಳಿಗೆ ಎಸ್.ಪಿ. ರ್ಯಾಂಕನ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ಗೃಹ ಸಚಿವರಾದ ಜಿ. ಪರಮೇಶ್ವರ ಅವರು ತಿಳಿಸಿದರು. ರಾಷ್ಟ್ರೀಯ ವಿಧಿ ವಿಜ್ಞಾನ ಸಂಸ್ಥೆಯ ವಿವಿಧ ವಿಭಾಗಗಳಿಗೆ ಹಾಗೂ ಪ್ರಯೋಗಾಲಯಗಳಿಗೆ ಭೇಟಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳು ಎಲ್ಲೆಡೆ ಯಾವುದೇ ಅಡೆತಡೆಗಳಿಲ್ಲದೇ ರಾಜ್ಯ, ದೇಶ, ವಿದೇಶದಾದ್ಯಂತ ನಡೆಯುತ್ತಿವೆ. ಈ ಹಿನ್ನಲೆಯಲ್ಲಿ ಆಧುನಿಕ ಅಪರಾಧ ತನಿಖೆಗಳಿಗೆ ತಕ್ಕಂತೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು…

Read More