BREAKING NEWS

ವಿರಾಟ ವಿಶ್ವಕರ್ಮರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆಯ ಸಾಂಸ್ಕೃತಿಕ ಸಭಾ ಭವನದಲ್ಲಿ ಹಮ್ಮಿಕೊಂಡ ವಿರಾಟ ವಿಶ್ವಕರ್ಮರ ಜಯಂತ್ಯೋತ್ಸವ ಕಾರ್ಯಕ್ರಮದ ಸಾನಿಧ್ಯವನ್ನು ತೊಂಡಿಕಟ್ಟಿ ಅವಧೂತ ಗಾಳೇಶ್ವರ ಮಠದ ಅಭಿನವ ವೆಂಕಟೇಶ್ವರ ಮಹಾರಾಜರು ವಹಿಸಿ ಮಾತನಾಡಿದ ಅವರು, ವಿಶ್ವಕರ್ಮರು ಗ್ರಾಮ ದೇವಿಯ ಆರಾಧಕರು. ಆದ್ದರಿಂದ ತಾವುಗಳು ಎಲ್ಲರೂ ಒಳ್ಳೆಯ ಮಾರ್ಗದಿಂದ ಸಾಗಬೇಕು. ಅಂದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದರು.ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ಸಮಾಜದ ಜನರು ಒಗ್ಗಟ್ಟಾಗಿ ಸಾಗಬೇಕು. ವಿಶ್ವಕರ್ಮರೆ ಮೊದಲ ಇಂಜೀನಿಯರ್. ಇವರು ಸಮಾಜಕ್ಕೆ ಅಪಾರವಾದ ಕೊಡುಗೆ ನೀಡುವದರ ಜೊತೆಗೆ…

Read More

ಬಳ್ಳಾರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ

ಬಳ್ಳಾರಿ ಜಿಲ್ಲಾಡಳಿತ ವತಿಯಿಂದ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ ಆವರಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣವನ್ನು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ನೆರವೇರಿಸಿ ಅವರು ಮಾತನಾಡಿದರು.ದೇಶ ಸ್ವಾತಂತ್ರ್ಯ ಪಡೆದ ನಂತರವೂ ಹೈದರಾಬಾದ್ ನಿಜಾಮ ಮೀರ್ ಉಸ್ಮಾನ್ ಅಲಿಯ ಆಡಳಿತಕ್ಕೆ ಒಳಪಟ್ಟಿದ್ದ ಕಲ್ಯಾಣ ಕರ್ನಾಟಕ ಪ್ರದೇಶಗಳಲ್ಲಿ ಶಿಕ್ಷಣ, ಉದ್ಯೋಗ, ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳು ತಟಸ್ಥವಾಗಿದ್ದವು ಹಾಗೂ ಕಲ್ಯಾಣ ಕರ್ನಾಟಕ ಘೋಷಣೆಯಾದ ಸಂದರ್ಭದಲ್ಲಿ ಬಳ್ಳಾರಿ…

Read More

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 74ನೇ ಜನ್ಮದಿನದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾರತಿಯ ಜನಾತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ರಾಮದುರ್ಗ ಮಂಡಲ ಇವರ ನೇತೃತ್ವದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 74ನೇ ಜನ್ಮದಿನದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲುವನ್ನು ವಿತರಿಸಿದರು. ಈ ಸಂದರ್ಭದಲ್ಲಿ ರಾಮದುರ್ಗ ಮಂಡಲದ ನೂತನ ಅಧ್ಯಕ್ಷರಾದ ಡಾ‌. ಕೆ.ವಿ.ಪಾಟೀಲ, ತಾಲ್ಲೂಕಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ನವೀನ ನಿಜಗುಲಿ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಶ್ರೀಮತಿ ಶಾಲಿನಿ ಈಳಗೇರ, ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರು ಚಂದ್ರಶೇಖರ ಹಿರೇಮಠ,…

Read More

ಲೋಕಾಪುರದಲ್ಲಿ ಅದ್ದೂರಿ ಮೆರವಣೆಗೆ ಮೂಲಕ ಗಣಪತಿ ವಿಸರ್ಜನೆ

ಬಾಗಲಕೋಟೆ ಜಿಲ್ಲೆ ಮುದ್ದೋಳ ತಾಲೂಕು ಲೋಕಾಪುರದಲ್ಲಿ ವಿವಿಧ ಕಡೆಗಳಲ್ಲಿ ಪ್ರತಿಷ್ಠಾಪಿಸಲಾದ ಗಣೇಶನ ಮೂರ್ತಿಯನ್ನು ಗಣೇಶೋತ್ಸವದ ಒಂಬತ್ತನೇ ದಿನವಾದ ರವಿವಾರ ಸಾವಿರಾರು ಜನರ ಸಮ್ಮುಖದಲ್ಲಿ ಅದ್ಧೂರಿ ಮೆರವಣಿಗೆಯಲ್ಲಿ ಡಿಜೆ ನೃತ್ಯ ಗಮನ ಸೆಳೆಯಿತು.

Read More

ಬಟಕುರ್ಕಿ ಗ್ರಾಮದಲ್ಲಿ ಹಿಂದೂ ಮಹಾಗಣಪತಿ ಉತ್ಸವ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಹಿಂದೂ ಮಹಾಗಣಪತಿ ಉತ್ಸವ ಹಾಗೂ ಹಿಂದೂ ಜನಜಾಗೃತಿ ಸಮಾವೇಶವನ್ನು ವಿಶ್ವ ಹಿಂದೂ ಪರಿಷತ್ ಬೆಳಗಾವಿ ವಿಭಾಗ ಸತ್ಸಂಗ ಸಂಘದ ಮುಖಂಡರಾದ ಡಾ.ವಿಜಯೇಂದ್ರಚಾರ್ಯ.ಜೋಶಿ ಅವರುಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಸಮರ್ಪಣೆ ಮಾಡುವ ಮೂಲಕ ಉದ್ಘಾಟಿಸಿದರುಈ ವೇಳೆ ದಿವ್ಯಸಾನಿಧ್ಯ ಪ.ಪೂಜ್ಯ ಶ್ರೀ ಜಗದ್ಗುರು ಸದಾಶಿವಾನಂದ ಮಹಾಸ್ವಾಮಿಗಳು ಗದಗ ಹಾಗೂ ಶ್ರೀಮ.ನಿ.ಪ್ರ. ಬಸವ ಮಹಾಸ್ವಾಮಿಗಳು ಚೌಕಿಮಠ ವಿರಕ್ತ ಮಠ ಬಟಕುರ್ಕಿ ಇವರು ಭಾಗವಹಿಸಿದ್ದರು. ಅಧ್ಯಕ್ಷತೆ : ಪ್ರಕಾಶ್…

Read More

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಮಾನವ ಸರಪಳಿ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ‌ ಚಾಲನೆ ನೀಡಿದರು

ಬೆಳಗಾವಿ ಸುವರ್ಣ ವಿಧಾ‌ನ ಸೌಧದಲ್ಲಿ‌ ರವಿವಾರ ಜರುಗಿದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಗೆ ಪುಷ್ಪ ನಮನವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ‌ ಸಲ್ಲಿಸಿ ಮಾತನಾಡಿದರು. ಪ್ರಜಾಪ್ರಭುತ್ವವು ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯಕ್ಕಾಗಿ ನಮ್ಮ ಅತ್ಯುನ್ನತ ಆಕಾಂಕ್ಷೆಗಳನ್ನು ಸಾಕಾರಗೊಳಿಸುವ ಶಕ್ತಿಯುತ ಮತ್ತು ಕ್ರಿಯಾತ್ಮಕ‌ ಶಕ್ತಿಯಾಗಿದೆ ಎಂದರು. ಭಾರತ ದೇಶವು ಅತ್ಯಂತ ಭವ್ಯ, ಶಕ್ತಿಶಾಲಿ ಮತ್ತು ಯಶಸ್ವಿ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ದೇಶವಾಗಿದೆ. ದೇಶದಲ್ಲಿ ಪರಿಣಾಮಕಾರಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮೂಲಧಾರೆ ಡಾ.ಬಿ.ಆರ್.ಅಂಬೇಡ್ಕರ್…

Read More

ಬಾಲೆಹೊಸೂರ ಗ್ರಾಮದಲ್ಲಿ ಮಾನವ ಸರಪಳಿ ವೇಳೆ ಜೇನು ಹುಳುಗಳು ದಾಳಿ

ಗದಗ ಜಿಲ್ಲೆ ಲಕ್ಷ್ಮೀಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದಲ್ಲಿಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಮಾನವ ಸರಪಳಿ ನಿರ್ಮಾಣ ಮಾಡಿದ ವೇಳೆಯಲ್ಲಿ ವಿದ್ಯಾರ್ಥಿಗಳ ಮೇಲೆ ಜೇನು ಹುಳುಗಳು ದಾಳಿ ನಡೆಸಿವೆ. ಘಟನೆಯಲ್ಲಿಇಬ್ಬರು ಶಿಕ್ಷಕಿಯರ ಮುಖ, ತಲೆ, ಕೈಗೆ ಜೇನು ಹುಳುಗಳು ಕಚ್ಚಿ ಗಾಯಗೊಳಿಸಿವೆ. ಶಿಗ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಸರಸ್ವತಿ ಗುಡಿಸಾಗರ, ಸರೋಜಾ ದಿಂಡೂರು ಜೇನು ಹುಳುಗಳು ಕಚ್ಚಿಸಿಕೊಂಡು ಶಿಕ್ಷಕಿಯರಿಗೆ ಸ್ಥಳದಲ್ಲಿ ಇದ್ದ ಶಿರಹಟ್ಟಿ ಕ್ಷೇತ್ರದ ಶಾಸಕ ಸ್ವತಃ ವೈದ್ಯರಾದ ಡಾ. ಚಂದ್ರು…

Read More

ಸೆ.15 ರಂದು 145 ಕಿ.ಮೀ.‌ಮಾನವ ಸರಪಳಿ; ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾರ್ಗ ಪರಿಶೀಲನೆ

ಬೆಳಗಾವಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾರತ ದೇಶದ ಪ್ರಜಾಪ್ರಭುತ್ವ, ಸಂವಿಧಾನದ ಮಹತ್ವವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇದೇ ಸೆ.15. ರಂದು ಜಿಲ್ಲೆಯಲ್ಲಿ ನಡೆಯಲಿರುವ 145 ಕಿ.ಮೀ. ಉದ್ದದ ಬೃಹತ್ ಮಾನವ ಸರಪಳಿ ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಶಿಂಧೆ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ‌ ಗುಳೇದ ಅವರೊಂದಿಗೆ ಮಾನವ ಸರಪಳಿಯ ಮಾರ್ಗವನ್ನು ಶುಕ್ರವಾರ ಪರಿಶೀಲಿಸಿದರು….

Read More

ಮಾನವ ಸರಪಳಿ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಲಿ: ಜಿಲ್ಲಾಧಿಕಾರಿ ಮೊಹಮ್ಮದ್ ರೊಷನ್.

ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮವು ಸೆ.15ರಂದು ಅಚ್ಚುಕಟ್ಟಾಗಿ ನಡೆಯಬೇಕು. ಯಾವುದೇ ಲೋಪಕ್ಕೆ ಅವಕಾಶವಾಗದಂತೆ ಅಧಿಕಾರಿಗಳು ಜಾಗೃತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ಹೇಳಿದರು. ಪಟ್ಟಣದಲ್ಲಿ ಪೂರ್ವ ಸಿದ್ಧತೆ ಮಾರ್ಗ ಪರಿಶೀಲನೆ ನಡೆಸಿದರು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಮಾರ್ಗ ಪರಿಶೀಲಿಸಿದ ಐಎಎಸ್ ಅಧಿಕಾರಿ ದಿನೇಶಕುಮಾರ ಮೀನಾ ಮಾತನಾಡಿ ಬೆಳಗಾವಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15ರಂದು ಬೆಳಿಗ್ಗೆ 9.30ರಿಂದ 10.30ರವರೆಗೆ 135 ಕಿ.ಮೀ ಉದ್ದದ ಮಾನವ ಸರಪಳಿ…

Read More

ಚನ್ನಮ್ಮನ ವಿಜಯೋತ್ಸವದ 200ನೇ ವರ್ಷದ ಅದ್ದೂರಿ ಆಚರಣೆ ಸಿದ್ಧತೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಾರಕಿಹೊಳಿ ಸೂಚನೆ

ಬೆಳಗಾವಿ : ಚನ್ನಮ್ಮನ ವಿಜಯೋತ್ಸವದ 200 ವರ್ಷಗಳು ಪೂರ್ಣಗೊಂಡ ಹಿನ್ನಲೆಯಲ್ಲಿ ಪ್ರಸಕ್ತ ಚನ್ನಮ್ಮ ಉತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರಾದ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಚನ್ನಮ್ಮ ಕಿತ್ತೂರು ಉತ್ಸವ-2024ರ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾಲಿನ ಚನ್ನಮ್ಮನ ಕಿತ್ತೂರ ಉತ್ಸವ 200ನೆ ವರ್ಷದ ವಿಜಯೋತ್ಸವದ ಅಂಗವಾಗಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಬೇಕು. ಉತ್ಸವದ ಹಿನ್ನಲೆಯಲ್ಲಿ ಕಿತ್ತೂರ ಸ್ವಚ್ಛತೆಗೆ…

Read More