ಮುಳ್ಳೂರ ಗುಡ್ಡದಲ್ಲಿ ಟ್ರಕ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗುಡ್ಡದ ಶಿವನ ಮೂರ್ತಿ ಎದುರುಗಡೆ ಚಾಲಕನ ನಿಯಂತ್ರಣ ತಪ್ಪಿ ಮೆಗ್ನೀಸ್ ಅದಿರಿನ ಟ್ರಕ್ KA 29 A 6100 ಪಲ್ಟಿಯಾಗಿದ್ದು ಚಾಲಕ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ. ಬೆಳಗಿನ ಜಾವ 4 ಗಂಟೆಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ ಈ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
