ಸವದತ್ತಿ ಯಲ್ಲಮ್ಮ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿ ಗುರುವಾರ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡಿದೆ.
ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿ ಗುರುವಾರ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ವಿವಿಧ ರಾಜಮನೆತನ, ಬ್ರಿಟಿಷರ ಆಡಳಿತಕ್ಕೆ ಒಳಪಟ್ಟಿದ್ದ ಸವದತ್ತಿ ಪುರಸಭೆ 1876ರಲ್ಲಿ ಪುರಸಭೆಯಾಗಿ ಇಂದಿಗೆ 150 ವರ್ಷ ಪೂರೈಸಿದೆ. ಅಲ್ಲದೆ, ನಗರದ ಜನಸಂಖ್ಯೆ ಕೂಡ 50 ಸಾವಿರ ಗಡಿ ದಾಟಿರುವ ಹಿನ್ನೆಲೆ 2023ರಲ್ಲಿಯೇ ನರಗಸಭೆಯನ್ನಾಗಿ ಮೇಲ್ದಗೇರಿಸಲು ಜಿಲ್ಲಾಡಳಿತವು ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಹಿನ್ನೆಲೆ ಸರ್ಕಾರವು ಸಮೀಕ್ಷೆಯ ವರದಿ ಹಾಗೂ ಶಾಸಕ ವಿಶ್ವಾಸ ವಸಂತ ವೈದ್ಯ ಅವರು…
