ವಿಶ್ವ ಕ್ಷಯರೋಗ ದಿನಾಚರಣೆ ಹಾಗೂ ಕ್ಷಯ ಮುಕ್ತ ಗ್ರಾಮ ಪಂಚಾಯಿತಿಗಳ ಸತ್ಕಾರ ಸಮಾರಂಭ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಉದ್ಘಾಟಿಸಿದರು.
ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ವಿಶ್ವ ಕ್ಷಯರೋಗ ದಿನಾಚರಣೆ ಹಾಗೂ ಕ್ಷಯ ಮುಕ್ತ ಗ್ರಾಮ ಪಂಚಾಯಿತಿಗಳ ಸತ್ಕಾರ ಸಮಾರಂಭವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಉದ್ಘಾಟಿಸಿ, ಮಾತನಾಡಿದರು. ವಿಶ್ವ ಆರೋಗ್ಯ ಸಂಸ್ಥೆಯು 2030 ರ ವೆಳೆಗೆ ಇಡೀ ವಿಶ್ವವನ್ನು ಕ್ಷಯರೋಗದಿಂದ ಮುಕ್ತಗೊಳಿಸುವ ಘೋಷಣೆ ಮಾಡಿದೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 35 ಗ್ರಾಮ…
