BREAKING NEWS

ಮನೆ ಮನೆಗೆ ಹೋಗಿ ಮತದಾರರ ಚೀಟಿ ನೀಡಲು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಸೂಚನೆ.

ಜಿಲ್ಲಾಧಿಕಾರಿ‌ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಹಾಯಕ ಚುನಾವಣಾಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಮಾತನಾಡಿದರು.ಮತದಾನ ದಿನ ಸಮೀಪಿಸುತ್ತಿರುವುದರಿಂದ ಚುನಾವಣಾ ಸಿಬ್ಬಂದಿ ಕೂಡಲೇ ಮನೆ ಮನೆಗೆ ತೆರಳಿ ಮತದಾರರ ಚೀಟಿ ವಿತರಣೆ ಮಾಡಬೇಕು ಎಂದು ಹೇಳಿದರು.ಮತದಾನ ಜಾಗೃತಿಗಾಗಿ ಅನೇಕ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದಕ್ಕೆ ಪೂರಕವಾಗಿ ಬಿಎಲ್.ಓ.ಗಳು ಮನೆ‌ಮನೆಗೆ ತೆರಳಿ ಮತದಾರರ ಚೀಟಿ ವಿತರಿಸುವುದರಿಂದ ಮತದಾನ‌ ಪ್ರಮಾಣ ಹೆಚ್ಚಿಸಲು ಸಾಧ್ಯವಾಗಲಿದೆ.ಕಳೆದ ಚುನಾವಣೆಯಲ್ಲಿ ಮತದಾನ ಕಡಿಮೆಯಾಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ತಪ್ಪದೇ…

Read More

ಗೋಕಾಕ ತಾಲೂಕಿನಾದ್ಯಾಂತ ಜಗದೀಶ್ ಶೆಟ್ಟರ್ ಗೆ ಬೆಂಬಲ…!!

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಗೋಕಾಕ್ ಮತಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಬೀರು ಬಿಸಿಲು ಲೆಕ್ಕಿಸದೆ ಸಾವಿರಾರು ಜನರು ಬೃಹತ್ ರೋಡ್ ಶೋ ನಲ್ಲಿ ಭಾಗ ವಹಿಸಿ ಮೋದಿ ಮೋದಿ ಎಂದು ಘೋಷಣೆ ಕೂಗಿ, ಬಿಜೆಪಿ ಅಭ್ಯರ್ಥಿಗೆ ಜಗದೀಶ್ ಶೆಟ್ಟರ್ ಗೆ ಬೆಂಬಲ ಸೂಚಿಸಿದರು.‌ ಗೋಕಾಕ ಮತ ಕ್ಷೇತ್ರದ ನಭಾಪೂರದಲ್ಲಿ ಖನಗಾಂವ, ಮಿಡಕನಕಟ್ಟಿ, ಶಿಲ್ತಿಭಾಂವಿ, ಮಕ್ಕಳಗೇರಿ, ಕೊಳವಿ, ಬೆಣಚಿನವರ್ಡಿ, ಮೂಲದಿನ್ನಿ, ಮಮದಾಪೂರ, ಹಿರೇನಂದಿ ಗ್ರಾಮಗಳ ಪ್ರಚಾರಾರ್ಥ ಸಮಾರಂಭದಲ್ಲಿ ಭಾಗವಹಿಸಿ, ಮತಯಾಚನೆ…

Read More

ಗೋಕಾಕ್ ಪಟ್ಟಣದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪ್ರಚಾರ ಸಭೆ

ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪರವಾಗಿ ಆಯೋಜನೆ ಮಾಡಲಾಗಿದ್ದ ಪ್ರಚಾರ ಸಭೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಪ್ರಧಾನಿ‌ ಆದ ನಂತರ ನಮಗೆ ಹೆಮ್ಮೆ ಅನಿಸುತ್ತದೆ. ಈ ಹಿಂದೆ ಬಹಳಷ್ಟು ಪ್ರಧಾನಿಗಳನ್ನು ನೋಡಿದ್ದೇನೆ. ಇಂದಿರಾಗಾಂಧಿ ನಂತರ ಗಟ್ಟಿಯಾದ ಪ್ರಧಾನಿ ಅಂದರೆ ಅದು ನರೇಂದ್ರ ಮೋದಿಯವರು. ಪ್ರಧಾನಿ ನರೇಂದ್ರ ಮೋದಿಯವರು ಭಾರತದ ನಾಯಕರು ಅಷ್ಟೇ ಅಲ್ಲ ವಿಶ್ವಾನಾಯಕರಾಗಿ ಬೆಳೆದು ನಿಂತಿದ್ದಾರೆ. ಕಳೆದ 10…

Read More

ನಿಯಂತ್ರಣ ಕಳೆದುಕೊಂಡ ಅಮಿತ್ ಶಾ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್

ಲೋಕಸಭಾ ಚುನಾವಣೆ ಪ್ರಚಾರದ ನಿಮಿತ್ಯ ಬಿಹಾರಕ್ಕೆ ತೆರಳಿದ್ದ ವೇಳೆ ಅಮಿತ್ ಶಾ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದಿಢೀರ್ ನಿಯಂತ್ರಣ ಕಳೆದುಕೊಂಡಿದ್ದು, ಅಮಿತ್ ಶಾ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬಿಹಾರದ ಬೆಗೂಸರೈನಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಅಮಿತ್ ಶಾ ಪಾಲ್ಗೊಂಡು ವಾಪಸ್ ಹೋಗುವಾಗ ಹೆಲಿಕಾಪ್ಟರ್ ಟೇಕ್ ಆಫ್ ಆಗುತ್ತಿದ್ದಂತೆ ಹಠಾತ್ತನೆ ನಿಯಂತ್ರಣ ತಪ್ಪಿ ಭಾರೀ ಭೀತಿ ಉಂಟು ಮಾಡಿದೆ. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹೆಲಿಕಾಪ್ಟರ್ ಪೈಲೆಟ್ ನ ನಿಯಂತ್ರಣ ಕಳೆದುಕೊಂಡಿದೆ. ಕೆಲ ಕಾಲ ಆಗಸದಲ್ಲಿ ತಿರುಗಿದೆ. ನಂತರ ಹೆಲಿಕಾಪ್ಟರ್…

Read More

ಬಿಜೆಪಿಯವರು ಸುಳ್ಳಿನ ಕಾರ್ಖಾನೆ ಇದ್ದಂಗೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಯರಗಟ್ಟಿಯ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಭಾನುವಾರ ನಡೆದ ಪ್ರಜಾಧ್ವನಿ 2 ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ನವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು ಮೇ 7 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದುಕೊಳ್ಳಿ. ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿದರೆ ನನಗೆ ಮತ ಹಾಕಿದಂತೆ.ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. 2014 ರಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಲೋಕಸಭೆಗೆ ನಿಂತು ಸ್ವಲ್ಪ ಮತಗಳಿಂದ ಸೋತಿದ್ದರು….

Read More

ಪ್ರಜ್ವಲ್ ರೇವಣ್ಣ ‘ಲೈಂಗಿಕ ಹಗರಣ’ ಪ್ರಕರಣ: ಎಸ್‌ಐಟಿ (SIT) ತನಿಖೆಯನ್ನು ಜೆಡಿ(ಎಸ್) ಸ್ವಾಗತಿಸಿದೆ

ಹಾಸನ: ಹಾಸನದ ಜನತಾ ದಳ (ಜಾತ್ಯತೀತ) ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಒಳಗೊಂಡ ಲೈಂಗಿಕ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ತನಿಖೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ ಒಂದು ದಿನದ ನಂತರ, ಪ್ರಾದೇಶಿಕ ಪಕ್ಷ ಏಪ್ರಿಲ್ 28, ಭಾನುವಾರ, ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದೆ. ಇದೀಗ ಪಕ್ಷದ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಲಾಗಿದ್ದು, ಮಾಜಿ ಪ್ರಧಾನಿ ಹೆಚ್.ಡಿ ಅವರ ಮೊಮ್ಮಗನೂ ಆಗಿರುವ ಸಂಸದರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯ ಬಗ್ಗೆ ಹಿರಿಯ ನಾಯಕರು ನಿರ್ಧರಿಸುವ…

Read More

ಪೆನ್‍ಡ್ರೈವ್ ಪ್ರಕರಣದಲ್ಲಿ ಕ್ರಮ ಜರುಗಿಸುವಂತೆ ಕೋರಿ ನೈಜ ಹೋರಾಟಗಾರರ ವೇದಿಕೆಯಿಂದ ಮುಖ್ಯ ನ್ಯಾಯಮೂರ್ತಿಗೆ ಪತ್ರ

ಹಾಸನ: ಇತ್ತೀಚಿನ ದಿನಗಳಲ್ಲಿ ಹಾಸನ ಜಿಲ್ಲೆಯಾದ್ಯಂತ ಮಹಿಳೆಯರ ಮೇಲೆ ದೌರ್ಜನ್ಯ, ಲೈಂಗಿಕ ಕ್ರಿಯೆಗಳ ವಿಡಿಯೋಗಳನ್ನು ವಿಕೃತಕಾಮಿಯೊಬ್ಬ ಸಾಮಾಜಿಕ ಜಾಲತಾಣ, ವಾಟ್ಸಪ್  ಮತ್ತು ಪೆನ್ ಡ್ರೈವ್ ಗಳ ಮೂಲಕ ವಿತರಿಸಿರುವ ಅಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಈ ವಿಷಯ ಬೆಳಕಿಗೆ ಬಂದ ತಕ್ಷಣ ಕೆಲ ಸಂಘಟನೆಗಳು ಸರ್ಕಾರದ ಗಮನಕ್ಕೆ ತಂದರು ಸಹಿತ ಸರ್ಕಾರವು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ನೋಡಿ ತಮ್ಮ ಆವಾಗನೆಗೆ   ತರುವ ಗುರುತರ ಜವಾಬ್ದಾರಿ ನೈಜ ಹೋರಾಟಗಾರರ ವೇದಿಕೆಗೆ ಇದೆ ಎಂದು  ನಾವು ನಾವಾದರೂ ಭಾವಿಸಿದೆವು. ಇದಕ್ಕೆ ಮುಖ್ಯ ಕಾರಣ…

Read More

ಕಟಕೋಳ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರಚಾರ ಸಭೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಹಾಗೂ ಗೂಡಚಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ಪರ ನಡೆದ ಬೃಹತ್ ಪ್ರಚಾರ ಸಭೆಯಲ್ಲಿ ಬಸವರಾಜ ಸೋಮಗೊಂಡ, ಯಲ್ಲಪ್ಪ ಪರಚನಿ,ಯಲ್ಲಪ್ಪ ಸಾಳುಂಕೆ, ಅಜ್ಜು ಪರಚನ್ನಿ,ರಾಮಣ್ಣ ಕರಬನ್ನಿ, ರಮೇಶ್ ದಳವಾಯಿ, ಆಕಾಶ್ ಎತ್ತಿನಮನೆ ,ದುಂಡಪ್ಪ ದಳವಾಯಿ,ಪ್ರಕಾಶ್ ಮೊಸಗನ್ನಿ ಇವರು ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದರು ಈ ಸಂದರ್ಭದಲ್ಲಿ ಅನೇಕ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು

Read More

ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ವತಿಯಿಂದ ಸಾಮೂಹಿಕ ವಿವಾಹ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಆರೆಬೇಂಚಿ ಕಲ್ಯಾಣ ಮಂಟಪದಲ್ಲಿ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ವತಿಯಿಂದ133ನೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ117ನೇ ಡಾ. ಬಾಬು ಜಗಜೀವನ ರಾಮ್ ಜಯಂತಿಯ ಅಂಗವಾಗಿ ಬೆಳಗಾವಿ ಜಿಲ್ಲಾ ಮಟ್ಟದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಪ್ರಶಾಂತ್ ರಾವ್ ಐಹೋಳೆ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು‌.ಈ ವೇಳೆ ರಾಜ್ಯಾಧ್ಯಕ್ಷರು ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ಮತ್ತು ಸಮಾನತೆ ಶ್ರೇಷ್ಠ ಭೂಷಣ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಸ್ಥರು ತಿರಕಪ್ಪ ಕೆ.ಚಿಕ್ಕೇರಿ…

Read More

ವಧುವನ್ನು ಅಪಹರಣ ಮಾಡಲು ಯತ್ನಿಸಿದ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.

ವರನ ಕಣ್ಣಿಗೆ ಮೆಣಸಿನ ಪುಡಿ ಹಾಕಿ ವಧುವನ್ನು ಅಪಹರಣ ಮಾಡಲು ಯತ್ನಿಸಿದ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.ವಧುವನ್ನು ಎಳೆದೊಯ್ಯಲು ಯತ್ನಿಸಿದ್ದು ಆಕೆಯ ಹೆತ್ತವರೇ ಆಗಿದ್ದಾರೆ. ಘಟನೆಯ ವೀಡಿಯೊ ವೈರಲ್ ಆಗಿದ್ದು, ವಧುವನ್ನು ಆಕೆಯ ಚೀರಾಟದ ನಡುವೆಯೇ ಎಳೆದಾಡಿರುವುದು ಕಂಡುಬರುತ್ತದೆ.ವರನ ಕುಟುಂಬಸ್ಥರ ಮೇಲೂ ವಧುವಿನ ಮನೆಯವರು ಮೆಣಸಿನ ಪುಡಿ ಎರಚಿ ಹಲ್ಲೆ ಮಾಡಿದ್ದಾರೆ. ವರನ ಸಂಬಂಧಿಕರು ಅಸ್ತವ್ಯಸ್ತರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಆಂಧ್ರಪ್ರದೇಶದ ನರಸರಾವ್‌ಪೇಟೆಯ ಕಾಲೇಜೊಂದರಲ್ಲಿ ಪಶುವೈದ್ಯಕೀಯ ವಿಜ್ಞಾನದಲ್ಲಿ ಡಿಪ್ಲೊಮಾ ಓದುತ್ತಿದ್ದಾಗ ಸ್ನೇಹಾ…

Read More