ಅನರ್ಹ ಬಿಪಿಎಲ್ ಕಾರ್ಡ್ದಾರರಿಗೆ ಶಾಕ್ ನೀಡಲಿದೆ ಆಹಾರ ಇಲಾಖೆ: 8 ಲಕ್ಷ ಪಡಿತರ ಚೀಟಿ ರದ್ದತಿಗೆ ತೆರೆಮರೆಯ ಸಿದ್ಧತೆ.
ಬೆಂಗಳೂರು : ಬಡ ಹಾಗೂ ಮಧ್ಯಮ ವರ್ಗದ ಜನರು, ಉಣ್ಣಲು ಗತಿ ಇಲ್ಲದವರಿಗಿಂತ ಹೆಚ್ಚಾಗಿ ಬಿಪಿಎಲ್ ಕಾರ್ಡ್ಗಳು ಅನರ್ಹರ ಕೈಸೇರಿರುವುದು ಗೊತ್ತಾಗಿದ್ದು, ಹತ್ತಾರು ಎಕರೆ ಜಮೀನು, ಓಡಾಡಲು ಐಷಾರಾಮಿ ಕಾರು, ವಾಸ ಮಾಡಲು ಬಂಗಲೆ ಇರುವವರೂ ಪಡಿತರ ಚೀಟಿ ಪಡೆದು ರೇಷನ್ ಪಡೆಯುತ್ತಿದ್ದಾರೆ. ಅದೆಷ್ಟೋ ಜನ ಅದನ್ನು ತಿನ್ನುವುದೂ ಇಲ್ಲ. ಬದಲಿಗೆ ಸಿಕ್ಕ ದರಕ್ಕೆ ಮಾರಾಟ ಮಾಡುತ್ತಾರೆ. ಆದರೆ ನಿಜವಾಗಿಯೂ ಪಡಿತರ ಚೀಟಿ ಯಾರಿಗೆ ಸಿಗಬೇಕೋ ಅವರಿಗೆ ಸಿಗುತ್ತಿಲ್ಲ. ಹೀಗಾಗಿ ಅನರ್ಹರಿಗೆ ನೀಡಿರುವ ಬಿಪಿಎಲ್ ಕಾರ್ಡ್ಗಳನ್ನ ರದ್ದು…
