ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಪ್ರಥಮ ಮೇಲ್ಮನವಿ ಪ್ರಾಧಿಕಾರಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆ ತರಬೇತಿ ಕಾರ್ಯಕ್ರಮ
ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಗುರುವಾರ ಜರುಗಿದ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಪ್ರಥಮ ಮೇಲ್ಮನವಿ ಪ್ರಾಧಿಕಾರಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾದ ಎ.ಎಂ.ಪ್ರಸಾದ ವಹಿಸಿ ಅವರು ಮಾತನಾಡಿದರು. ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ಭ್ರಷ್ಟಾಚರ ನಿವಾರಣೆಗಾಗಿ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದ್ದು. ಮಾಹಿತಿ ಹಕ್ಕುಕಾಯ್ದೆಯಡಿ ಮಾಹಿತಿ ಕೋರಿ ಅರ್ಜಿ ಸಲ್ಲಿಸುವ ಅರ್ಜಿದಾರರಿಗೆ ಕಾಲಮಿತಿಯೊಳಗೆ ಮಾಹಿತಿ ಒದಗಿಸುವುದು ಸಾರ್ವಜನಿಕ ಮಾಹಿತಿ ಅಧಿಕಾರಿಯ ಕರ್ತವ್ಯವಾಗಿದೆ ಎಂದು ರಾಜ್ಯ…
