ಕಾಶ್ಮೀರ ಕಣಿವೆಯ ಪಹಲ್ಗಾಮ್‌ನಲ್ಲಿ ನಡೆದ ಹಿಂದುಗಳ ಹತ್ಯೆಯನ್ನು ಖಂಡಿಸಿ ವಿಶ್ವಹಿಂದು ಪರಿಷತ್ ಹಾಗೂ ಭಜರಂಗದಳ ಹಾಗೂ ಹಲವು ಹಿಂದೂಪರ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಹಿಂದುಗಳ ಹತ್ಯೆ ಹಾಗೂ ರಾಜ್ಯದ ಕೆಲ ಕಡೆಗಳಲ್ಲಿ ಪವಿತ್ರ ಜನಿವಾರ ಧರಿಸಿದ ವಿದ್ಯಾರ್ಥಿಗಳನ್ನು ಸಿ.ಇ.ಟಿ. ಪರೀಕ್ಷಾ ಬರೆಯುವದಕ್ಕೆ ಅವಕಾಶ ನೀಡದೇ ಇರುವ ಕ್ರಮವನ್ನು ಖಂಡಿಸಿ ಸ್ಥಳೀಯ ವಿಶ್ವಹಿಂದು ಪರಿಷತ್ ಹಾಗೂ ಭಜರಂಗದಳ ಹಾಗೂ ಹಲವು ಹಿಂದೂಪರ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಇಬ್ಬರು ಕನ್ನಡಿಗರು ಸೇರಿದಂತೆ 27 ಅಮಾಯಕ ಜನರು ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಅಲ್ಲಿ ಭಯದ ವಾತಾವತವರಣ ಉಂಟಾಗಿದೆ….
