ಸರಕಾರಿ ಚಿತ್ರಕಲಾ ಮಹಾವಿದ್ಯಾಲಯದ ಆರ್ಟ್‍ಗ್ಯಾಲರಿಯಲ್ಲಿ ಜರುಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಧಾರವಾಡ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಚಿತ್ರಕಲಾ ಶಿಲ್ಪಿ ಶ್ರೀ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನಿಂದ ಶ್ರೀ ಡಿ.ವ್ಹಿ.ಹಾಲಭಾವಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ಸರಕಾರಿ ಚಿತ್ರಕಲಾ ಮಹಾವಿದ್ಯಾಲಯದ ಆರ್ಟ್‍ಗ್ಯಾಲರಿಯಲ್ಲಿ ಚಿತ್ರಕಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದಾವಣಗೇರಿ ವಿಶ್ವವಿದ್ಯಾಲಯ ದೃಶ್ಯ ಕಲಾ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಜೈರಾಜ ಎಂ. ಚಿಕ್ಕಪಾಟೀಲ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸಮಾಜದ ತುಡಿತದೊಂದಿಗೆ ತಮ್ಮ ಸೃಜನಾತ್ಮಕ ಕಲೆಯನ್ನು ಬೆರೆಸುವ ಮೂಲಕ ಕಲಾವಿದರು ಶ್ರೇಷ್ಠ ಕಲಾಕೃತಿಗಳನ್ನು ರಚಿಸಬೇಕು….
