ಬೆಳಗಾವಿ ಪತ್ರಿಕಾ ಭವನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು.
ಬೆಳಗಾವಿ ವಿಶ್ವೇಶ್ವರಯ್ಯ ನಗರದಲ್ಲಿ ಶುಕ್ರವಾರ ಪತ್ರಿಕಾ ಭವನ ಹಾಗೂ ತೋಟಗಾರಿಕೆ ಇಲಾಖೆ ಕಚೇರಿ ಕಟ್ಟಡಗಳ ಭೂಮಿ ಪೂಜೆಯನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ನೆರವೇರಿಸಿ ಅವರು ಮಾತನಾಡಿದರು. ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನವನ್ನು ಒದಗಿಸುವ ಮೂಲಕ ಅನೇಕ ದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಅದೇ ರೀತಿ ಅಗತ್ಯ ಅನುದಾನ ಒದಗಿಸುವ ಮೂಲಕ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು. ತೋಟಗಾರಿಕೆ ಇಲಾಖೆಯ ಕಟ್ಟಡ ನಿರ್ಮಾಣ ಮಾಡುವದರ ಮೂಲಕ ಸಾರ್ವಜನಿಕರಿಗೆ…
