ಬೆಂಗಳೂರುನ 18,000 ಎಕ್ರೆ ಜಮೀನಿನಲ್ಲಿ ಉಪನಗರ ಯೋಜನೆ: ವ್ಯಾಪಕ ಆಕ್ರೋಶ
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ರೈತರ ಜಮೀನಿನಲ್ಲಿ ಉಪನಗರ ನಿರ್ಮಿಸಲು ಮುಂದಾಗಿದೆ. ಆದರೆ ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದು ರೈತ ವಿರೋಧಿ ನಿರ್ಧಾರ, ಕೂಡಲೇ ಈ ಯೋಜನೆಯನ್ನು ಕೈಬಿಡಬೇಕು ಎಂಬ ಒತ್ತಡಗಳು, ಆಗ್ರಹಗಳು ಹೆಚ್ಚಾಗಿವೆ. ರೈತರ ಕೃಷಿ ಜಮೀನಿನಲ್ಲಿ ಉಪನಗರ ನಿರ್ಮಾಣಕ್ಕೆ ಕೈಹಾಕಿ ಉಪ ಚುನಾವಣೆ ಹೊತ್ತಲ್ಲಿ ಸರ್ಕಾರ ಕೈಸುಟ್ಟುಕೊಂಡಿತೆ ಎನ್ನಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿ, ಸೂಲಿಬೆಲೆ ಹೋಬಳಿಗಳ 36 ಗ್ರಾಮಗಳ 18,000 ಎಕರೆ ಕೃಷಿ ಭೂಮಿಯಲ್ಲಿ ಉಪನಗರ ನಿರ್ಮಿಸಲು ನಿರ್ಧಾರ…
