ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶಾಸಕ ಅಶೋಕ ಪಟ್ಟಣ ಅವರು ಉಚಿತ ನೋಟ್‌ಬುಕ್ ಹಾಗೂ ಬ್ಯಾಗ್ ವಿತರಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದ ಪಿಎಂಶ್ರೀ ಸರಕಾರಿ ಶಾಲೆಯ ಎರಡು ಸ್ಮಾರ್ಟ್ ಕ್ಲಾಸ್, ಎರಡು ಹೈಟೆಕ್ ನಲಿಕಲಿ ತರಗತಿ ಉದ್ಘಾಟನೆ, ಪಿಎಂಶ್ರೀ ಯೋಜನೆಯ ವಿವಿಧ ಚಟುವಟಿಕೆಗಳಿಗೆ ಚಾಲನೆ ಹಾಗೂ ಎಲ್ಲ ವಿದ್ಯಾರ್ಥಿಗಳಿಗೆ ತಮ್ಮದೇ ಖರ್ಚಿನಿಂದ ಉಚಿತ ನೋಟಬುಕ್ ಹಾಗೂ ಶಾಲಾ ಬ್ಯಾಗ್‌ಗಳನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ವಿತರಿಸಿ ಅವರು ಮಾತನಾಡಿದರು.ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನೂಕೂಲವಾಗಲಿ ಎಂಬ ಸದುದ್ದೇಶದಿಂದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ರೂಪಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು…
