ಮಾದಕ ವಸ್ತು ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ: ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಹೊಸಮನೆ
ಬಳ್ಳಾರಿ ಪಟ್ಟಣದ ಇನ್ಸ್‍ಟ್ಯೂಟ್ ಆಪ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಕಾಲೇಜು ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮ ಸಸಿಗೆ ನೀರು ಉಣಿಸುವುದರ ಮೂಲಕ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಹೊಸಮನೆ ಉದ್ಘಾಟಿಸಿ ಅವರು ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳು ವಿವಿಧ ರೂಪದಲ್ಲಿ ದೊರೆಯುತ್ತಿದ್ದು, ಹೊರ ದೇಶಗಳಿಂದಲು ಕಳ್ಳ ಸಾಗಣೆಯಾಗುತ್ತಿದೆ. ಇದರ ಸೇವನೆ ಹಾಗೂ ಕಳ್ಳ ಸಾಗಣೆ ಮಾಡುವುದು ಅಪರಾಧವಾಗಿದ್ದು, ಈ ಅಪರಾಧದಲ್ಲಿ ಪಾಲ್ಗೊಂಡರೆ ಕಾನೂನಿನಡಿ ಕಠಿಣ…
