ಕೆ.ಚಂದರಗಿಯಲ್ಲಿ ಜಲಾನಯನ ಯಾತ್ರೆ’ ಕಾರ್ಯಕ್ರಮಕ್ಕೆ ಚಾಲನೆ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕೆ.ಚಂದರಗಿ ಗ್ರಾಮದಲ್ಲಿ ಗುರುವಾರ ಕೃಷಿ ಇಲಾಖೆ ವತಿಯಿಂದ ನಡೆದ ‘ಜಲಾನಯನ ಯಾತ್ರೆ’ ವಾಹನಕ್ಕೆ ಬೆಳಗಾವಿಯ ಜಂಟಿ ಕೃಷಿ ನಿರ್ದೇಶಕರು ಎಸ್ ಎಸ್ ಪಾಟೀಲ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ರೈತರು ಮಣ್ಣು ಮತ್ತು ನೀರಿನ ಸಂರಕ್ಷಣೆ ಮಾಡುವುದು ಅತಿ ಅವಶ್ಯಕ. ಮಣ್ಣಿನ ಸವಕಳಿ ತಪ್ಪಿಸಲು ಬದುಗಳನ್ನು ನಿರ್ಮಿಸಿಕೊಳ್ಳಬೇಕು. ಬೇಸಿಗೆ ಆರಂಭವಾಗಿದ್ದು ನೀರಿನ್ನು ಮಿತವಾಗಿ ಬಳಸಬೇಕು. ಹನಿ ನೀರಾವರಿ ಸೇರಿದಂತೆ ವಿವಿಧ ಘಟಕಗಳನ್ನು ಬಳಸಿಕೊಳ್ಳಬೇಕು ಎಂದರು. ಈ ವೇಳೆ…
