ಮನಮೋಹನ್ ಸಿಂಗ್ ನಿಧನ: ಇಂದು ಸರ್ಕಾರಿ ರಜೆ, ರಾಜ್ಯದಲ್ಲಿ 7 ದಿನ ಶೋಕಾಚರಣೆ
ಬೆಂಗಳೂರು, ಡಿಸೆಂಬರ್ 26: ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ (manmohan Singh) ಅವರು ಗುರುವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ. ಅವರ ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ನಾಳೆ ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನ ಹಿನ್ನಲೆ ನಾಳೆ ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಎಲ್ಲಾ ಕಾರ್ಯಕ್ರಮಗಳನ್ನು ಈಗಾಗಲೇ ರದ್ದು ಮಾಡಲಾಗಿದೆ. ಇತ್ತ ಕಾರ್ಯಕ್ರಮ ರದ್ದು…
