BREAKING NEWS

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್

ಬೆಳಗಾವಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವಂತ 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಶರಣಗೌಡ ಕಂದಕೂರ್ ಅವರು ಕೇಳಿದಂತ ಪ್ರಶ್ನೆಗೆ ಉತ್ತರಿಸಿರುವಂತ ಅವರು ರಾಜ್ಯದಲ್ಲಿ 4871 ಸರ್ಕಾರಿ ಪ್ರೌಢ ಶಾಲೆಗಳಿದ್ದಾವೆ. 11,796 ಸಹ ಶಿಕ್ಷಕರ ವಿಷಯವಾರು ಹುದ್ದೆಗಳು ಖಾಲಿ ಇದ್ಯಾವೆ ಎಂದರು. ಖಾಯಂ ಹುದ್ದೆ ಭರ್ತಿ ಆಗುವವರೆಗೂ ಅಥವಾ ಶೈಕ್ಷಣಿ ಸಾಲಿನ ಅಂತ್ಯದವರೆಗೂ ತಾತ್ಕಾಲಿಕವಾಗಿ ಅತಿಥಿ…

Read More

ಹುಬ್ಬಳ್ಳಿಯಿಂದ ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ

ಹುಣ್ಣಿಮೆ ಹಾಗೂ ಅಮಾವಾಸ್ಯೆಯ ದಿನಗಳಲ್ಲಿ ಹುಬ್ಬಳ್ಳಿ ನಗರದಿಂದ ಬೆಳಗಾವಿ ಜಿಲ್ಲೆ ಸವದತ್ತಿಯ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗುವ ಭಕ್ತರಿಗೆ ಅನುಕೂಲವಾಗುವಂತೆ ವಾಯುವ್ಯ ಸಾರಿಗೆ ಸಂಸ್ಥೆಯ ವತಿಯಿಂದ ವಿಶೇಷ ಬಸ್‌ಗಳನ್ನು ಓಡಿಸುತ್ತಿರುವುದಾಗಿ ಸಾರಿಗೆ ಸಂಸ್ಥೆ ತಿಳಿಸಿದೆ.ಸವದತ್ತಿಯ ಯಲ್ಲಮ್ಮನ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಡಿಸೆಂಬರ್ 15 ರಂದು ಭಾನುವಾರ ಹುಣ್ಣಿಮೆಯಂದು ಮತ್ತು ಬರುವ ಅಮಾವಾಸ್ಯೆಯ ವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರದಂದು ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಈ ಬಗ್ಗೆ ವಾಯವ್ಯ ಕರ್ನಾಟಕ…

Read More

ಸವದತ್ತಿ ವಕೀಲರ ಪರಿಷತ್ತು ಘಟಕದ ವತಿಯಿಂದ 2 ಎ ಮೀಸಲಾತಿಗಾಗಿ ರಸ್ತೆ ತಡೆದು ಪ್ರತಿಭಟನೆ.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಎಪಿಎಂಸಿ ಚೆನ್ನಮ್ಮ ವೃತ್ತದಲ್ಲಿ 2 ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜ ಜನರು ಹಾಗೂ ಸಮಾಜದ ಮುಖಂಡರು ತಮ್ಮ ಒಂದು ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟಿಸಿದರು . ಇದರಿಂದ ಎರಡು ತಾಸು ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು ಎಲ್ಲಮ್ಮನ ದೇವಸ್ಥಾನಕ್ಕೆ ಬರುವ ಭಕ್ತರು ಸಾಕಷ್ಟು ತೊಂದರೆ ಅನುಭವಿಸಿದರು. ಸವದತ್ತಿ ಮಾರ್ಗದ ಎಲ್ಲ ರಸ್ತೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಈ ಒಂದು ಪ್ರತಿಭಟನೆ ಕಾರ್ಯಕ್ರಮದಲ್ಲಿ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ನ್ಯಾಯವಾದಿಗಳು ಎಂಬಿ…

Read More

ಗ್ರಾಮ ಪಂಚಾಯತ್ ಅಸ್ತಿಗಳ ಸಮೀಕ್ಷೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ ರಾಜ್ಯದ ಗ್ರಾಮ ಪಂಚಾಯತ್ವ್ಯಾ ಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಪರಿಷತ್ ನಲ್ಲಿಂದು ಹೇಳಿದರು. ಪ್ರಶೋತ್ತರ ಕಲಾಪದಲ್ಲಿ ಎನ್. ರವಿಕುಮಾರ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯೂಯಲ್‌ ಸಮೀಕ್ಷೆ ನಡೆಸಿ…

Read More

ಯಾದಗಿರಿ- ಆಲಮಟ್ಟಿ ರೈಲುಮಾರ್ಗ ಯೋಜನೆ ಅನುಮೋದನೆಗೆ ಮನವಿ

ರಾಯಚೂರು ಸಂಸದ ಜಿ.ಕುಮಾರ ನಾಯಕ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ನವದೆಹಲಿಯಲ್ಲಿ ಗುರುವಾರ ಭೇಟಿ ಮಾಡಿ ಆಲಮಟ್ಟಿ -ಯಾದಗಿರಿ ರೈಲು ಮಾರ್ಗ ಯೋಜನೆಗೆ ಅನುಮೋದನೆ ನೀಡುವಂತೆ ಒತ್ತಾಯಿಸಿದರು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ, ತೆಲಂಗಾಣ ಹಾಗೂ ಒಡಿಶಾದಲ್ಲಿ ರೈಲ್ವೆ ಸಂಪರ್ಕ ಜಾಲ ಕಡಿಮೆ ಇದೆ. ಈ ಲೋಪವನ್ನು ಸರಿಪಡಿಸಲು ರಾಜ್ಯದ ರೈಲು ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕು. ಆಲಮಟ್ಟಿ -ಯಾದಗಿರಿ ರೈಲು ಮಾರ್ಗದ ಬೇಡಿಕೆಯು ದಶಕಗಳಷ್ಟು ಹಳೆಯದು ಎಂದು ಸಚಿವರ ಗಮನಕ್ಕೆ…

Read More

ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ ನೆರವು : ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌

ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ ನೆರವು ದೊರೆಯುತ್ತಿದ್ದು, ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಹೇಳಿದ್ದಾರೆ. ದೇವದಾಸಿ ಮಹಿಳೆಯರಿಗೆ ಮಾಸಾಶನ ಯೋಜನೆಯಡಿಯಲ್ಲಿ ಪ್ರತಿ ತಿಂಗಳು 2,000, ಆರ್ಥಿಕ ಸಹಾಯ ಯೋಜನೆಯಡಿ 30,000ಸಹಾಯಧನ ಹಾಗೂ ಮಾಜಿ ದೇವದಾಸಿ ವಸತಿ ಯೋಜನೆಯಡಿ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ. ಅಂತೆಯೇ ದೇವದಾಸಿ ಪದ್ಧತಿಯನ್ನು ಬೇರು ಸಮೇತ ಕಿತ್ತೊಗೆಯಲು ಪ್ರಯತ್ನಿಸಲಾಗುವುದು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಅವರ ಚುಕ್ಕೆ ಗುರುತಿನ…

Read More

3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ : ಲಕ್ಷ್ಮೀ ಹೆಬ್ಬಾಳ್ಳರ್

ಬೆಳಗಾವಿ, ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವ ಲಕ್ಷ್ಮಿ ಹೆಬ್ಬಾಳ್ಳರ್‌ ತಿಳಿಸಿದ್ದಾರೆ. ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಸದಸ್ಯ ಜವರಾಯಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸದಾಗಿ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯವಿದೆ. ಏಕೆಂದರೆ ಅಂಗನವಾಡಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ಪೂರೈಸಲಾಗುವ ಪೂರಕ ಪೌಷ್ಟಿಕ ಆಹಾರ ಯೋಜನೆ ಯಡಿ ಹಂಚಿಕೆ…

Read More

ಬೆಳಗಾವಿ ಪತ್ರಿಕಾ‌ ಭವನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು.

ಬೆಳಗಾವಿ ವಿಶ್ವೇಶ್ವರಯ್ಯ ನಗರದಲ್ಲಿ ಶುಕ್ರವಾರ ಪತ್ರಿಕಾ ಭವನ‌ ಹಾಗೂ ತೋಟಗಾರಿಕೆ ಇಲಾಖೆ‌ ಕಚೇರಿ ಕಟ್ಟಡಗಳ ಭೂಮಿ ಪೂಜೆಯನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ನೆರವೇರಿಸಿ ಅವರು ಮಾತನಾಡಿದರು. ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನವನ್ನು ಒದಗಿಸುವ ಮೂಲಕ ಅನೇಕ ದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಅದೇ ರೀತಿ ಅಗತ್ಯ ಅನುದಾನ ಒದಗಿಸುವ ಮೂಲಕ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು. ತೋಟಗಾರಿಕೆ ಇಲಾಖೆಯ ಕಟ್ಟಡ‌ ನಿರ್ಮಾಣ‌ ಮಾಡುವದರ ಮೂಲಕ‌ ಸಾರ್ವಜನಿಕರಿಗೆ…

Read More

ಕೌಜಲಗಿ ತಾಲ್ಲೂಕು ರಚನೆಗಾಗಿ ಧರಣಿ: ಬೆಳಗಾವಿ ಅಧಿವೇಶನದಲ್ಲಿಯೇ ಕೌಜಲಗಿ ತಾಲ್ಲೂಕು ಘೋಷಣೆಗೆ ಆಗ್ರಹ

ಕೌಜಲಗಿ: ರಾಜ್ಯದ ಅತೀ ದೊಡ್ಡ ಜಿಲ್ಲೆಯಾದ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕನ್ನು ಜಿಲ್ಲೆಯನ್ನಾಗಿಸಿ , ಗೋಕಾಕ ತಾಲ್ಲೂಕಿನ ಹೋಬಳಿ ಕೇಂದ್ರವಾದ ಕೌಜಲಗಿ ಪಟ್ಟಣವನ್ನು ನೂತನ ತಾಲ್ಲೂಕು ಕೇಂದ್ರವನ್ನಾಗಿ ಇದೇ ಬೆಳಗಾವಿ ಅಧಿವೇಶನದಲ್ಲಿಯೇ ಘೋಷಿಸಬೇಕೆಂದು ಕೌಜಲಗಿ ತಾಲ್ಲೂಕು ಹೋರಾಟಗಾರರ ವೇದಿಕೆ ಸರ್ಕಾರಕ್ಕೆ ಆಗ್ರಹಪಡಿಸಿದೆ.ಪಟ್ಟಣದ ಕಳ್ಳಿಗುದ್ದಿ ಸರ್ಕಲ್ ನಲ್ಲಿ ಗುರುವಾರ ಕೌಜಲಗಿ ತಾಲ್ಲೂಕು ಹೋರಾಟಗಾರರು ಕೌಜಲಗಿ ತಾಲ್ಲೂಕು ರಚನೆಗಾಗಿ ಒಂದು ದಿನದ ಸಾಂಕೇತಿಕ ಧರಣಿ ನಡೆಸಿ,ಕೌಜಲಗಿ ಉಪ ತಹಶೀಲ್ದಾರರ ಪರವಾಗಿ ಉಪತಹಸೀಲ್ದಾರ ಡಿ.ಸಿ. ಪತ್ತಾರ ಅವರಿಗೆ ಮನವಿ ಸಲ್ಲಿಸಿದರು. ಉಪತಹಶೀಲ್ದಾರರ…

Read More

ಪಂಚಮಸಾಲಿ ಸಮಾಜದ ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿ ಸುವರ್ಣ ಸೌಧ ಮುತ್ತಿಗೆ ಸಂದರ್ಭದಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜಗೆ ಆಕ್ರೋಶ ವ್ಯಕ್ತಪಡಿಸಿ, ಕೆ.ಚಂದರಗಿ ಹತ್ತಿರ ಹೆದ್ಧಾರಿ ತಡೆ ಪ್ರತಿಭಟನೆ ನಡೆಸಿದರು.

ರಾಮದುರ್ಗ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದ 2ಎ ಮೀಸಲಾತಿ ನೀಡಬೇಕೆಂದು ಬೆಳಗಾವಿ ಸುವರ್ಣಸೌಧ ಬಳಿ ಹೋರಾಟ ಮಾಡುತ್ತಿರುವ ಸಂದರ್ಭದಲ್ಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ ಮಾಡಿಸಿರುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ತಾಲೂಕಿನ ಲಿಂಗಾಯತ ಪಂಚಮಸಾಲಿ ಸಮುದಾಯದ ಜನತೆ ಗುರುವಾರ ರಾಮದುರ್ಗ ತಾಲೂಕಿನ ಕೆ.ಚಂದರಗಿಯ ರಾಜ್ಯ ಹೆದ್ಧಾರಿಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಬೆಳಗಾವಿ-ಬಾಗಲಕೋಟ ರಾಜ್ಯ ಹೆದ್ಧಾರಿ ಕೆ.ಚಂದರಗಿಯ ಚೆನ್ನಮ್ಮ ಸರ್ಕಲ್‌ನಲ್ಲಿ ಕೆಲಕಾಲ ರಸ್ತೆತಡೆ ನಡೆಸಿ, ಪಂಚಮಸಾಲಿ ಸಮುದಾಯ ವಿರೋಧಿ ನೀತಿ ಅನುಸರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…

Read More