ಪ್ರವಾಸಕ್ಕೆ ಬಂದಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ಸಮುದ್ರ ಪಾಲು
ಕಾರವಾರ: ಶೈಕ್ಷಣಿಕ ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಈ ದುರ್ಘಟನೆ ನಡೆದಿದೆ. ಇಂದು (ಡಿಸೆಂಬರ್ 10) ಸಂಜೆ ಕಡಲ ತೀರದಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ಕು ಬಾಲಕರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಸದ್ಯ ಓರ್ವ ವಿದ್ಯಾರ್ಥಿ ಶವ ಪತ್ತೆಯಾಗಿದ್ದು, ಇನ್ನುಳಿದ ಮೂವರು ವಿದ್ಯಾರ್ಥಿಗಳಿಗೆ ಶೋಧ ಕಾರ್ಯ ನಡೆದಿದೆ. ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6…
