ಬೆಳಗಾವಿ ಅಧಿವೇಶನ ಸಂದರ್ಭದಲ್ಲಿಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ವಿಧಾನಮಂಡಳ ಚಳಿಗಾಲ ಅಧಿವೇಶನ-2024 ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು.ಪ್ರಸಕ್ತ ಸಾಲಿನ ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9 ರಿಂದ ನಡೆಯಲಿದೆ. ಅಧಿವೇಶನ ಸಂದರ್ಭದಲ್ಲಿ ಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ ಕಡಿಮೆ ಸಮಯಾವಕಾಶವಿದ್ದು, ಅಧಿವೇಶನ ಯಶಸ್ವಿಗಾಗಿ ಅಧಿಕಾರಿಗಳು, ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಹೇಳಿದರು. ಅಧಿವೇಶನದ ಯಶಸ್ವಿಗಾಗಿ ಈಗಾಗಲೇ…
