ನ.1 ರಂದು ಕರ್ನಾಟಕ ಅದ್ದೂರಿ ರಾಜ್ಯೋತ್ಸವ; ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ.
ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ವಹಿಸಿ ಮಾತನಾಡಿದರು. ನ.1 ರಂದು ದೀಪಾವಳಿ ಹಬ್ಬದ ದಿನವೇ ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಅತೀ ವಿಜೃಂಭಣೆಯಿಂದ ಆಚರಿಸಲಾಗುವದು. ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡ ನಾಡು ನುಡಿಗಾಗಿ ಶ್ರಮಿಸಿದ ಕನ್ನಡ ಹೋರಾಟಗಾರರಿಗೆ ಸನ್ಮಾನ ಮಾಡಲಾಗುವುದು. ಅಲ್ಲದೇ ಈ ಬಾರಿ ಕನ್ನಡ ಪರ ಹೋರಾಟಗಾರರು ಹಾಗೂ…
