ಗಂಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ : ಸಿಎಂ ಸಿದ್ದರಾಮಯ್ಯ
ಬೆಳಗಾವಿ ಜಿಲ್ಲೆ ಗೋಕಾಕ ಪಟ್ಟಣದ ವಿವಿಧ ಪ್ರದೇಶಗಳು ಮತ್ತು ಗಂಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು, ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು. ಲೋಳಸೂರ ಸೇತುವೆಯ ಬಳಿ ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕನಗರದ ಹಳೆ ದನಗಳ ಪೇಟೆ, ಮಟನ್ ಮಾರ್ಕೆಟ್, ಕುಂಬಾರಗಲ್ಲಿ, ಉಪ್ಪಾರಗಲ್ಲಿ, ಭೋಜಗಾರ ಗಲ್ಲಿ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ…
