ಗೋಕಾಕ ಗಂಜಿ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ನದಿತೀರದ ಗ್ರಾಮಸ್ಥರು ಪ್ರವಾಹದಿಂದ ಯಾವುದೇ ರೀತಿಯ ತೊಂದರೆ ಅಥವಾ ಅಪಾಯಕ್ಕೆ ಸಿಲುಕಿದರೆ ತಕ್ಷಣವೇ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಪ್ರವಾಹ ಸಹಾಯವಾಣಿ ಸಂಖ್ಯೆಗಳು-0831-2407290ಪೊಲೀಸ್ ಸಹಾಯವಾಣಿ-0831-2474054ತುರ್ತು ಸಹಾಯಕ್ಕಾಗಿ -112 ಬೆಳಗಾವಿ ಜಿಲ್ಲೆ ಗೋಕಾಕ ಪಟ್ಟಣದ ಗಂಜಿ ಕೇಂದ್ರಗಳಿಗೆ ಭಾನುವಾರ ಖುದ್ದಾಗಿ ಭೇಟಿ ಮಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಥಳಾಂತರಗೊಂಡಿರುವ ಕುಟುಂಬಸ್ಥರ ಗಂಜಿ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಊಟೋಪಹಾರ ಮತ್ತಿತರ ಮೂಲಸೌಕರ್ಯಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸರಕಾರಿ…
