ನಾಡ ವಿರೋಧಿ ಉದ್ಯಮಿಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳ ಉದ್ಯೋಗ ಮೀಸಲಾತಿ ನೀಡುವ ವಿಧೇಯಕವನ್ನು ವಿರೋಧಿಸುತ್ತಿರುವ ನಾಡ ವಿರೋಧಿ ಉದ್ಯಮಿಗಳ ವಿರುದ್ಧ ಪಟ್ಟಣದ ಶ್ರೀ ಲಕ್ಷ್ಮಿ ವೆಂಕಟೇಶ್ ದೇವಸ್ಥಾನ ದಿಂದ ತಾಲೂಕಾ ಆಡಳಿತ ಸೌಧದ ವರೆಗೆ. ಪ್ರತಿಭಟನೆ ನಡೆಸಿ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ 50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ…
