ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಜಗದೀಶ ಶೆಟ್ಟರ ಅವರಿಗೆ ಜುಲೈ-12 ರಂದು ಸಂಜೆ 4 ಗಂಟೆಗೆ ತುರನೂರ ಶ್ರೀ ವಿಶ್ವೇಶ್ವರಯ್ಯ ಕಲ್ಯಾಣ ಮಂಟಪದಲ್ಲಿ ಅಭಿನಂಧನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.
ರಾಮದುರ್ಗ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರು, ಜಿಲ್ಲೆಯಿಂದ ಭಾರತೀಯ ಜನತಾ ಪಕ್ಷದ ಮತದಾರರು 1.80 ಲಕ್ಷ ಅಧಿಕ ಮತಗಳ ಅಂತರದಿಂದ ಆಯ್ಕೆ ಮಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಲು ತಾಲೂಕು ಸೇರಿದಂತೆ ಲೋಕಸಭಾ ಕ್ಷೇತ್ರದ ಮತದಾರರು ಶ್ರಮಿಸಿದ್ಧಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಆಡಳಿತ ಇದ್ದರೂ ಜನತೆ 17 ಬಿಜೆಪಿ ಹಾಗೂ 2 ಜೆಡಿಎಸ್ ಸಂಸದರನ್ನು ಆಯ್ಕೆ ಮಾಡಿ 28 ರಲ್ಲಿ 19 ಕ್ಷೇತ್ರಗಳಿಂದ ಪಕ್ಷದ…
