ಬೆಸ್ಕಾಂ ಗೋಲ್ಮಾಲ್: ಕೋಟ್ಯಂತರ ರೂ. ಅವ್ಯವಹಾರ ಆರೋಪ, ಕೋಲಾರದಲ್ಲಿ ಪ್ರಕರಣ ದಾಖಲು
ಕೋಲಾರ: ವಿದ್ಯುತ್ ಪರಿಕರಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಮಾರಾಟ ಮಾಡಿರುವ ಆರೋಪದಲ್ಲಿ ಮೂವರು ಬೆಸ್ಕಾಂ ಎಂಜಿನಿಯರ್ ಸೇರಿ ಹಲವು ಸಿಬ್ಬಂದಿ ವಿರುದ್ದ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹಗರಣದಲ್ಲಿ ಹಿರಿಯ ಅಧಿಕಾರಿಗಳು ಶಾಮೀಲಾಗಿರುವ ಆರೋಪವಿದ್ದು, ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎನ್ನಲಾಗಿದೆ. ವಿದ್ಯುತ್ ತಂತಿ ಹಾಗೂ ಬೆಲೆ ಬಾಳುವ ವಿದ್ಯುತ್ ಪರಿಕರಗಳನ್ನು ಕಳ್ಳತನ ಮಾಡಿ ಯಾವುದೇ ಟೆಂಡರ್ ಇಲ್ಲದೆ ಮಾರಾಟ ಮಾಡಿರುವ ಹಗರಣದ ಆರೋಪ ಬೆಸ್ಕಾಂ (BESCOM) ಅಧಿಕಾರಿಗಳು ಹಾಗೂ ಎಂಜಿನಿಯರ್ಗಳ ವಿರುದ್ಧ ಕೇಳಿಬಂದಿದೆ….
