ಹಲಗತ್ತಿ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಣಿಗೊಂಡ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು ಲಲಿತಾ. ಲ. ಹೂಗಾರ, ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ ವೇಳೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಆಯುಷ್ಮಾನ್ ಆರೋಗ್ಯ ಮಂದಿರ ಹಲಗತ್ತಿಯಡಾ. ಬಸಪ್ಪ.ಮಾನಪ್ಪನವರ ಮಾತನಾಡಿಜನರಿಗೆ ಅನುಕೂಲವಾಗುವ ರೀತಿಯಲ್ಲಿ ಮನರೇಗಾ ಕೂಲಿಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಕೈಗೊಳ್ಳಲಾಗಿದ್ದು ಅದರ ಸದುಪಯೋಗ…
