ದಾರವಾಡ ಅಧಿಕಾರಿಗಳೊಂದಿಗೆ ಮೇಲ್ಸೆತುವೆ ಕಾಮಗಾರಿಯನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ದಿವ್ಯಪ್ರಭು
ಹುಬ್ಬಳ್ಳಿ ನಗರದಲ್ಲಿ ಮೇಲ್ಸೆತುವೆ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ ಶೇ.50 ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ. ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು. ಹುಬ್ಬಳ್ಳಿ ನಗರದ ಚನ್ನಮ್ಮ ವೃತ್ತ, ಹಳೇ ಕೋರ್ಟ್ ವೃತ್ತ, ಇಂದಿರಾ ಗಾಜಿನ ಮನೆ ವೃತ್ತದಲ್ಲಿ ಪ್ರಗತಿಯಲ್ಲಿರುವ ಮೇಲ್ಸೆತುವೆ ಕಾಮಗಾರಿಯನ್ನು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ, ಸರ್ಕ್ಯೂಟ್ ಹೌಸನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ನಗರದಲ್ಲಿ 2022 ರಿಂದ ಮೇಲ್ಸೆತುವೆ ಕಾಮಗಾರಿ ಪ್ರಗತಿಯಲ್ಲಿದೆ….
