ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ -1ಜಿಲ್ಲಾ ವೆಬ್‍ಕಾಸ್ಟಿಂಗ್ ಕೇಂದ್ರಕ್ಕೆ ಡಿ.ಸಿ., ಸಿಇಓ ದಿಡೀರ್ ಭೇಟಿ; ಪರೀಕ್ಷೆಗಳ ಲೈವ್ ಸ್ಟ್ರೀಮಿಂಗ್ ವೀಕ್ಷಣೆ
ದಾರವಾಡ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-1 ರ ಎರಡನೇಯ ದಿನವಾದ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳು ಗಣಿತ ವಿಷಯ ಪರೀಕ್ಷೆ ಬರೆಯುತ್ತಿದ್ದಾರೆ.ಜಿಲ್ಲಾ ಪಂಚಾಯತ ಮೂರನೇ ಮಹಡಿಯಲ್ಲಿ ಸ್ಥಾಪಿಸಿರುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಪರೀಕ್ಷಾ ಕೇಂದ್ರ ಹಾಗೂ ಪರೀಕ್ಷಾ ಕೊಠಡಿಗಳ ನೇರ ವೀಕ್ಷಣೆಗೆ ಸ್ಥಾಪಿಸಿರುವ ಜಿಲ್ಲಾ ವೆಬ್‍ಕಾಸ್ಟಿಂಗ್ ಕೇಂದ್ರಕ್ಕೆ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ಅವರು ದಿಢೀರ್ ಭೇಟಿ ನೀಡಿ ಪರೀಕ್ಷಾ ಕೊಠಡಿಗಳ ಲೈವ್ ಸ್ಟ್ರೀಮಿಂಗ್ ವೀಕ್ಷಿಸಿದರು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಿಯಮಾನುಸಾರ…
