ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಮೃತ ಸರೋವರ ಜಿಲ್ಲಾ ಪುರಸ್ಕಾರ ಸೇರಿದಂತೆ ಒಟ್ಟು ಐದು ಪ್ರಶಸ್ತಿಗಳನ್ನು ಬೆಳಗಾವಿ ಜಿಲ್ಲೆಗೆ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್. ಅಂಬೇಡ್ಕರ್ ಮೆಮೋರಿಯಲ್ ಟ್ರಸ್ಟ್ ಅಂಬೇಡ್ಕರ್ ಭವನದಲ್ಲಿ ಬುಧವಾರ ನರೇಗಾ ಹಬ್ಬ-2025 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಂಕಾ ಖರ್ಗೆ ಅವರು ಜಿಪಂ ಸಿಇಒ ರಾಹುಲ್ ಶಿಂಧೆ, ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪ, ಎಡಿಪಿಸಿ ಬಸವರಾಜು, ಜಿಲ್ಲಾ ಐಇಸಿ ಸಂಯೋಜಕ ಪ್ರಮೋದ ಗೋಡೆಕರ್ ಅವರಿಗೆ ಅಮೃತ ಸರೋವರ ಜಿಲ್ಲಾ ಪುರಸ್ಕಾರ ನೀಡಿ ಗೌರವಿಸಿದರು. ಅದೇ…
