ಮಹಾತ್ಮಾ ಗಾಂಧೀಜಿ ಪುತ್ಥಳಿ ಅನಾವರಣ ಸಮಾರಂಭ ಡಿಸೆಂಬರ್ 27 ರಂದು ನಡೆಯಲಿದ್ದು ಸ್ವಾತಂತ್ರ್ಯ ಯೋಧರ ಮನೆಗಳಿಗೆ ತೆರಳಿ ಆಹ್ವಾನ ನೀಡಿದ ಸಚಿವ ಎಚ್.ಕೆ.ಪಾಟೀಲ
ಶತಮಾನೋತ್ಸವದ ಸಮಿತಿಯ ಅಧ್ಯಕ್ಷ ಹಾಗೂ ರಾಜ್ಯದ ಕಾನೂನು ಮತ್ತು ಸಂಸದಿಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ ಪಾಟೀಲರು ಸಾಂಕೇತಿಕವಾಗಿ ಸ್ವಾತಂತ್ರ‍್ಯ ಯೋಧರ ಮನೆಗಳಿಗೆ ತೆರಳಿ ಸುವರ್ಣ ಸೌಧದ ಮುಂದೆ ಪ್ರತಿಷ್ಠಾಪಿಸಲಾಗಿರುವ ಮಹಾತ್ಮ ಗಾಂಧೀ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಕುಟುಂಬ ಸಮೇತ ಆಗಮಿಸಲು ಆಹ್ವಾನ ನೀಡಿದರು. ರಾಮತೀರ್ಥನಗರದಲ್ಲಿ ಇರುವ ಅಣ್ಣು ಗುರೂಜಿ ಅವರ ಮನೆಗೆ, ಹನುಮಾನ ನಗರದಲ್ಲಿರುವ ವಿಠ್ಠಲರಾವ್ ಯಾಳಗಿ ಹಾಗೂ 1924 ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ರೂವಾರಿ ಶ್ರೀಗಂಗಾಧರರಾವ್ ದೇಶಪಾಂಡೆ ಅವರ ಮನೆಗಳಿಗೆ ಖುದ್ದಾಗಿ ಭೇಟಿ…
