ಪಂಚಮಸಾಲಿ ಸಮಾಜದ ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿ ಸುವರ್ಣ ಸೌಧ ಮುತ್ತಿಗೆ ಸಂದರ್ಭದಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜಗೆ ಆಕ್ರೋಶ ವ್ಯಕ್ತಪಡಿಸಿ, ಕೆ.ಚಂದರಗಿ ಹತ್ತಿರ ಹೆದ್ಧಾರಿ ತಡೆ ಪ್ರತಿಭಟನೆ ನಡೆಸಿದರು.
ರಾಮದುರ್ಗ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದ 2ಎ ಮೀಸಲಾತಿ ನೀಡಬೇಕೆಂದು ಬೆಳಗಾವಿ ಸುವರ್ಣಸೌಧ ಬಳಿ ಹೋರಾಟ ಮಾಡುತ್ತಿರುವ ಸಂದರ್ಭದಲ್ಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ ಮಾಡಿಸಿರುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ತಾಲೂಕಿನ ಲಿಂಗಾಯತ ಪಂಚಮಸಾಲಿ ಸಮುದಾಯದ ಜನತೆ ಗುರುವಾರ ರಾಮದುರ್ಗ ತಾಲೂಕಿನ ಕೆ.ಚಂದರಗಿಯ ರಾಜ್ಯ ಹೆದ್ಧಾರಿಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಬೆಳಗಾವಿ-ಬಾಗಲಕೋಟ ರಾಜ್ಯ ಹೆದ್ಧಾರಿ ಕೆ.ಚಂದರಗಿಯ ಚೆನ್ನಮ್ಮ ಸರ್ಕಲ್‌ನಲ್ಲಿ ಕೆಲಕಾಲ ರಸ್ತೆತಡೆ ನಡೆಸಿ, ಪಂಚಮಸಾಲಿ ಸಮುದಾಯ ವಿರೋಧಿ ನೀತಿ ಅನುಸರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…
