ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ
ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನುಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದಅನುಮತಿಯನ್ನು ನೀಡಲಾಗಿದ್ದು, ಜಿಲ್ಲೆಯ ರೈತರು ತಮ್ಮ ಜಮೀನಿನಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್ https://landrecords.karnataka.gov.in/service4ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ.ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕಛೇರಿ ಪ್ರಕಟಣೆ ತಿಳಿಸಿದ್ದಾರೆ
