ಮಕ್ಕಳು ದಿನಾಲೂ ಶಾಲೆಗೆ ಬರಬೇಕು. ಯಾವುದೇ ಕಾರಣಕ್ಕೂ ಶಾಲೆಗೆ ತಪ್ಪಿಸಬಾರದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು.
ಬಳ್ಳಾರಿ ನಗರದ ಪಟೇಲ್ ನಗರ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, 7 ತರಗತಿಯ ಮಕ್ಕಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.ಮನೆಯಲ್ಲಿ ಶಾಲೆಗೆ ಹೋಗಲು ಅಡ್ಡಿಪಡಿಸಿದರೆ, ನಾನು ತಪ್ಪದೇ ಶಾಲೆಗೆ ಹೋಗುತ್ತೇನೆ ಎಂದು ಹೇಳಬೇಕು. ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಬೇಕು. ಆರೋಗ್ಯದಿಂದಿರಬೇಕು. ಶಿಕ್ಷಣ ಪಡೆದುಕೊಂಡು ಉನ್ನತ ವ್ಯಕ್ತಿಗಳಾಗಿ ಹೊರಹೊಮ್ಮಬೇಕು ಎಂದು ಸಚಿವರು ಆಶಿಸಿದರು. ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಯಾರೂ ಹೇಳುತ್ತೀರಾ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್.ಮಧು ಬಂಗಾರಪ್ಪ…
