ಗಣಪತಿ ವಿಸರ್ಜನೆ ವೇಳೆ ಕಲ್ಲು ತೋರಾಟ ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಪ್ರತಿಭಟನೆ
ಮಂಡ್ಯ ಜಿಲ್ಲೆ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ.ಅದ್ದೂರಿಯಾಗಿ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿತ್ತು. ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲುತೂರಾಟ ನಡೆಸಿದ್ದಾರೆ. ಈ ವೇಳೆ ಹಿಂದೂ-ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟವಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಬಳಿಕ ಕಿಡಿಗೇಡಿಗಳ…
